ಜಿಲ್ಲೆಗಳು

ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಮ್ಯೂಸಿಕ್ ಚೇರ್ ಆಟ : ಗೇಟ್‌ಪಾಸ್ ಸಿಕ್ಕಿದ್ದಾದರೂ ಯಾರಿಗೆ ?

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ.
ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಗೊಂದಲ ಮುಂದುವರೆಯಲಿದೆ.
ಪೈಪೋಟಿ: ಉಮೇಶ್ ಅವರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಆದರೆ ಸೆ.೫ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಗಕ್ಕೆ ಬೆಂಗಳೂರಿನ ಪಿಯು ಬೋರ್ಡ್ನ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.
ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರೆಯುವAತೆ ಉಮೇಶ್ ಅವರ ಪರವಾಗಿ ಸೆ.೧೯ರಂದು ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಅವರು ಕೂಡ ಮತ್ತೆ ವಾಪಸ್ ಬಂದಿದ್ದಾರೆ. ಇಬ್ಬರಿಗೂ ಆದೇಶವಿರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

45 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

56 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

1 hour ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago