ಮೂರು ದಿನಗಳ ಮೈಸೂರು ನಗರ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ
ಮೈಸೂರು: ದಿನವಿಡೀ ನಾನಾ ರೀತಿಯ ಒತ್ತಡಗಳಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಗಂಭೀರ ಮುಖ ಛಾಯೆಯನ್ನು ಹೊಂದಿಕೊಂಡು ಸಮಾಜದ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಪೊಲೀಸರು ತಮ್ಮ ಕುಟುಂಬದ ಸದಸ್ಯರೊಂದಿಗೆ, ಸಹ ಸಿಬ್ಬಂದಿಗಳೊಂದಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು, ವೀಕ್ಷಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.
ನ ೧೭ ರಿಂದ ೧೯ ರವರೆಗೆ ಮೂರು ದಿನಗಳ ಕಾಲ ನಡೆಯುವ ಮೈಸೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಮೈಸೂರು ನಗರಪಾಲಿಕೆ ಅಯುಕ್ತ ಲಕ್ಷ್ಮೀಕಾಂತ ರೆಡ್ಡಿ ಅವರು ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಅತ್ಯಗತ್ಯ. ಕ್ರೀಡೆಯಲ್ಲಿ ಸಾಧನೆ ಮಾಡಿ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರು ತನ್ನಿ ಎಂದರು.
ಪೊಲೀಸರು ಪ್ರತಿದಿನ ಹಲವಾರು ಒತ್ತಡಗಳ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಈ ರೀತಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ ಮತ್ತು ಕ್ರೀಡಾಕೂಟ ಕಾರ್ಯಕ್ರಮದಿಂದ ನಮ್ಮ ಎಲ್ಲಾ ಒತ್ತಡಗಳನ್ನು ಮರೆಯುವಂತೆ ಆಗಿದೆ ಎಂದರು.