Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ: ರಾಮಚಂದ್ರರಾಜೇ ಅರಸ್ 

ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.

ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಸೋತಿ ಮೆಮೋರಿಯಲ್ ಕಪ್-೨೦೨೨’ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಬೇಕು. ಕ್ರೀಡೆ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡುತ್ತದೆ. ಹೀಗಾಗಿ ಬಾಲ್ಯದಿಂದಲೇ ಮಕ್ಕಳನ್ನು ಕ್ರೀಡಾಸಕ್ತರನ್ನಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಮಹಾಬೋದಿ ಶಾಲೆಯ ಸಿಇಒ ಜಿಕ್‌ಮೆಟ್ ಮಾಂಗ್‌ದಸ್ ಜ್ಯೋತಿ ವಾತನಾಡಿ, ನಮ್ಮ ಸಂಸ್ಥೆಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಯಾವುದೇ ಕ್ರೀಡಾ ಚಟುವಟಿಕೆ ನಡೆದಿರಲಿಲ್ಲ. ಇದೀಗ ಮತ್ತೆ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಗ್ರೂಪ್ ಕಮಾಂಡರ್ ಆರ್.ಆರ್.ಮೆನನ್, ಮಹಾಬೋಧಿ ಶಾಲೆಯ ಶಿಕ್ಷಣ ಸಂಯೋಜಕ ವೆಂಕಟೇಶ್ವರಲು, ಪ್ರಾಂಶುಪಾಲ ಪಿ.ಆರ್.ದ್ವಾರಕೀಶ್, ಹಿರಿಯ ಕೋಚ್ ಲುಟಾನ್ ತಾಶಿ ಇನ್ನಿತರರು ಹಾಜರಿದ್ದರು. ೨ ದಿನಗಳ ಕಾಲ ನಡೆಯುವ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ