ಮೈಸೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣವಾಗಬೇಕು ಎಂಬ ಒತ್ತಾಯಕ್ಕೆ ಕೊನೆಗೂ ಫಲ ಸಿಕ್ಕಿದೆ. ನಗರದ ಸಿದ್ಧಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಎದುರು ದೇವರಾಜ ಅರಸು ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ಆದೇಶ ಹೊರಡಿಸಿದೆ.
ʼಕರ್ನಾಟಕ ಸುವರ್ಣ ಸಂಭ್ರಮʼದ ಗುರುತಾಗಿ ಈ ಪ್ರತಿಮೆ ಸ್ಥಾಪನೆಯಾಗಲಿದ್ದು, ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 92 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಪ್ರತಿಮೆಯನ್ನು ಅಯೋಧ್ಯೆಯ ಬಾಲರಾಮನ ಪ್ರತಿಮೆ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಸಹೋದರ ವೈ ಸೂರ್ಯಪ್ರಕಾಶ್ ಕೆತ್ತಲಿದ್ದಾರೆ.