ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ ನಡೆಯುವುದು ವಾಡಿಕೆ.
ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ನಾನಾ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ರಾತ್ರಿ 7.30ಕ್ಕೆ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ದೇವಾಲಯದ ಕೆಳ ಆವರಣದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಆರಾಧನೆ ವಾಡಲಾಯಿತು.
ಸಾವಿರಾರು ಮಂದಿ ಭಕ್ತರು ಈ ಅವಿಸ್ಮರಣೀಯ ಗಳಿಗೆಯನ್ನು ಕಣ್ತುಂಬಿಕೊಂಡರು. ಮೊದಲಿಗೆ ಬೆಟ್ಟದ ದೇವಾಲಯದಲ್ಲಿರುವ ದೇವರಿಗೆ ನಮಿಸಿದ ಜನತೆ ನಂತರ ದೇವಾಲಯದ ಕೆಳ ಆವರಣದಲ್ಲಿರುವ ದೇವಿ ಕೆರೆ ಬಳಿಗೆ ತೆರಳಿ ತೆಪ್ಪೋತ್ಸವವನ್ನು ಕಂಡು ಸಂಭ್ರಮಿಸಿದರು.
ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ದೇವಿಯ ಮೂರ್ತಿಯನ್ನಿಟ್ಟು ದೇವಿಕೆರೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ನಡೆಸಲಾಯಿತು. ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಪಚ್ಚೆ ಹಾರ ಸೇರಿದಂತೆ ನಾನಾ ಆಭರಣಗಳಿಂದ ಅಲಂಕರಿಸಲಾಗಿತ್ತು.
ಕುಶಾಲುತೋಪು ಸಿಡಿಸಿ ದೇವಿಗೆ ಗೌರವ ಸಲ್ಲಿಸಲಾಯಿತು. ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…