ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು.
ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸ್ಥಳಕ್ಕೆ ಆಗಮಿಸಿ, ಮುಖ್ಯಮಂತ್ರಿಗಳು ಡಿ.೧೨ರಂದು ಮ.ಬೆಟ್ಟಕ್ಕೆ ಬರುತ್ತಿರುವುದರಿಂದ ಅಲ್ಲಿ ರೈತ ಸಂಘದ ಮುಖಂಡರಿಗೆ ಬೇಡಿಕೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಮಾಡಿಕೊಡುವುದಾಗಿ ತಿಳಿಸಿದರು. ನಂತರ ರೈತರು ದಿಗ್ಬಂಧನ ತೆರವುಗೊಳಿಸಿದರು. ಬಳಿಕ ಕಚೇರಿಯ ಸಿಬ್ಬಂದಿ ಹೊರಹೋಗಲು ಅವಕಾಶ ಕಲ್ಪಿಸಲಾಯಿತು.
ಆದರೆ ಹೋರಾಟವನ್ನು ಮುಂದುವರಿಸುವುದಾಗಿ ಬಡಗಲಪುರ ನಾಗೇಂದ್ರ ಅವರು ತಿಳಿಸಿದ್ದು, ಮುಖ್ಯಮಂತ್ರಿಯ ಭೇಟಿಯ ನಂತರ ಚಳವಳಿ ಮುಂದುವರಿಸಬೇಕೋ ಅಥವಾ ಮುಕ್ತಾಯಗೊಳಿಸಬೇಕೋ ಎಂಬುದನ್ನು ಆನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಹನೂರು ಮುಖಂಡ ಮುಜಾಮಿಲ್ ಪಾಷ, ತಾಲ್ಲೂಕು ರೈತ ಮುಖಂಡರು ಶೈಲೇಂದ್ರ, ಮಧುವನಹಳ್ಳಿ ಬಸವರಾಜಪ್ಪ, ಭಾಸ್ಕರ, ಅರೇಪಾಳ್ಯ ನಾಗರಾಜು,ಜೋಯಲ್ ನಿವಾಸ ಇತರರು ಹಾಜರಿದ್ದರು.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…