ಜಿಲ್ಲೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಪ್ರಜ್ಞೆ : ಜಿಟಿಡಿ

ಮೈಸೂರು: ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಅವರು ಇಂದು ಮೈಸೂರು ತಾಲ್ಲೂಕು ಜಯಪುರ ಹೋಬಳಿ ದಾರಿಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಏರ್ಪಡಿಸಿದ್ದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಸಾಧನ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ನಂಬಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ 12 ವರ್ಷಗಳಲ್ಲಿ ಮೈಸೂರು ಜಿಲ್ಲೆಯಲ್ಲಿ 17,610 ಸ್ವಸ್ವಹಾಯ ಸಂಘಗಳ ಮೂಲಕ 1,58,000 ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲೆಯಲ್ಲಿ ಕಾರ್ಯಾರಂಭಿಸಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಪೂಜ್ಯರ ಮಾರ್ಗದರ್ಶನದಲ್ಲಿ ಸ್ವ ಸಹಾಯ ಸಂಘಗಳ ಮೂಲಕ ಹಲವಾರು ಮಂದಿ ಉತ್ತಮ ಬದುಕನ್ನು ಕಟ್ಟಿಕೊಂಡು ಆರ್ಥಿಕವಾಗಿ ಸಧೃಢರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸದಸ್ಯರಿಗೆ ಆರ್ಥಿಕ ಸಹಕಾರ ನೀಡುವುದರ ಜೊತೆಗೆ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಿಕೊಡುತ್ತಿರುವ ಸಂಸ್ಥೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳು ಸಮಾಜದ ದುರ್ಬಲ ವರ್ಗದವರಿಗೆ ಆಶಾಕಿರಣವಾಗಿದೆ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹೆಚ್ಚಿನ ದಾಖಲೆಗಳ ಜಂಜಾಟವಿಲ್ಲ, ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಸಾಲ ಪಡೆಯಬಹುದಾಗಿದೆ. ಹೀಗಾಗಿ ಸಣ್ಣ-ಪುಟ್ಟ ವ್ಯಾಪಾರ ಆರಂಭಿಸಿ, ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಗೊಳಿಸಬೇಕೆಂಬ ಕನಸು ಕಾಣುವ ಬಡ ಮಹಿಳೆಯರಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಭರವಸೆ ಬೆಳಕಾಗಿದೆ ಎಂದರು.

ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಜಯರಾಮ ನೆಲ್ಲಿತ್ತಾಯ, ದಾರಿಪುರ ಗ್ರಾಮದ ಬಸವಣ್ಣ, ಜಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಾದೇವಿ, ಬರಡನಪುರ ಬಸವಣ್ಣ, ಸದಸ್ಯರುಗಳು, ಮುಖಂಡರುಗಳು ಭಾಗವಹಿಸಿದ್ದರು.

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago