ಜಿಲ್ಲೆಗಳು

ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ : ಮಂಜೇಗೌಡ

ಮೈಸೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಆಕೆಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುವುದಾಗಿ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.

ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಘೋಷ್ಟಿುಂಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಅವರು ಸರ್ಕಾರ ಅಧೀಕನದಲ್ಲಿರುವ ಸಾರ್ವಜನಿಕರ ಸೇವಕರು. ಈ ವಿಚಾರವನ್ನು ಮರೆತಂತಿರುವ ಅವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುವಂತೆ ನಡೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಅವರ ವಿಚಾರದಲ್ಲಿ ದಿವ್ಯ ಮೌನಕ್ಕೆ ಶರಣಾಗಿರುವುದು ಏಕೆ ಎಂಬುದು ತಳಿಯುತ್ತಿಲ್ಲ ಎಂದರು.

ಪಾರಂಪರಿಕ ಕಟ್ಟಡವಾದ ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ಈಜು ಕೊಳ ನಿರ್ಮಾಣ ಮಾಡಿರುವುದು ತಪ್ಪು ಎಂದು ವರದಿ ತಿಳಿಸಿದೆ. ತನಿಖೆ ನಡೆಸಿದ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಧರಣಿ ನಡೆಸುವುದಾಗಿ ಹೇಳಿದರು.

ಸಿಂದೂರಿ ಅವರು ಈಗ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ಕೂಡ ಅವರು ತಮ್ಮ ದರ್ಬಾರನ್ನು ಮುಂದುವರಿಸಿದ್ದಾರೆ. ಇಲಾಖೆಯ ವ್ಯಾಪ್ತಿಗೆ ಬರುವ ಎ ಮತ್ತು ಬಿ ದರ್ಜೆಯ ದೇವಾಲಯಗಳ ಹಣಕಾಸು ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಯಾವುದೇ ಇಲಾಖೆಯಲ್ಲಿನ ಲೆಕ್ಕಪತ್ರಗಳ ಪರಿಶೀಲನೆ ಸ್ಟೇಟ್ ಅಕೌಂಟಕ್ ಮೂಲಕವೇ ನಡೆಯಬೇಕು. ಆದರೆ, ಸಿಂಧೂರಿ ಅವರು ಕಮನಿಷನ್ ಆಸೆಗಾಗಿ ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದ್ದಾರೆ. ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದರು.

ಇನ್ನು ತಿರುಪತಿಯಲ್ಲಿ ೪೫೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ನೀಲಿನಕ್ಷೆ ಸಿದ್ಧಪಡಿಸಲು ತನ್ನ ಪತಿಯ ಒಡೆತನದ ಸಂಸ್ಥೆಗೆ ಗುತ್ತಿಗೆ ನೀಡಿದ್ದಾರೆ. ಇದಕ್ಕಾಗಿ ೧೦ ಕೋಟಿ ರೂ. ಹಣವನ್ನು ನೀಡಿದ್ದಾರೆ. ಜನರ ತೆರಿಗೆ ಹಣವನ್ನು ಈರೀತಿ ಪೋಲು ಮಾಡುತ್ತಿದ್ದರು. ಸಂಬಂದಪಟ್ಟವರು ಆಕೆಯನ್ನು ಎಚ್ಚರಿಸುವ ಕೆಲಸವನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

ಯಾವುದೇ ಅಧಿಖಾರಿಯಾದರೂ ಕೂಡ ಕಚೇರಿಗೆ ಬಂದು ಕೆಲಸ ನಿರ್ವಹಿಸಬೇಕು. ಆದರೆ, ಸಿಂಧೂರಿ ಅವರು ವಾರದಲ್ಲಿ ಮೂರು ದಿನವೂ ಕಚೇರಿಗೆ ಬರುವುದಿಲ್ಲ. ಮನೆಯಲ್ಲಿ ಕುಳಿತೇ ಎಲ್ಲವನ್ನೂ ನಿರ್ವಹಿಸುತ್ತಾರೆ. ಅವರ ಕಚೇರಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿದಲ್ಲಿ ಆಕೆ ತಿಂಗಳಲ್ಲಿ ಎಷ್ಟು ದಿನ ಕೆಲಸಕ್ಕೆ ಬಂದಿದ್ದಾರೆ ಎಂದು ಗೊತ್ತಾಗುತ್ತದೆ ಎಂದರು.

ಇನ್ನು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ವೇಳೆ ಕೆಲ ದಿನಗಳಕಾಲ ಎಟಿಐ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಪಾಪಸ್ಸಾಗುವಾಗ ಬೆಲೆಬಾಳುವ ಪೀಠೋಪಕರಣಗನ್ನು ಜೊತೆಗೆ ಕೊಂಡೊಯ್ದಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಸಾಕಷ್ಟು ಪತ್ರ ವ್ಯವಹಾರ ನಡೆದಿದೆ. ಈ ಸಂಬಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಗ್ರಾ.ಪಂ ಸದಸ್ಯ ಶಿವಕುಮಾರ್, ಶ್ರೀನಿವಾಸ್, ದಿನೇಶ್ ಪತ್ರಿಕಾಘೋಷ್ಟಿಯಲ್ಲಿ ಉಪಸ್ಥಿತರಿದ್ದರು.

andolana

Recent Posts

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

5 mins ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

54 mins ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

1 hour ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

1 hour ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

2 hours ago

ಪ್ರಹ್ಲಾದ್‌ ಜೋಶಿರವರ ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಕೇಂದ್ರ ಸಚಿವ ಸ್ಥಾನಕ್ಕೆ ಶೋಭೆ ತರಲ್ಲ-ಎಚ್‌.ಕೆ.ಪಾಟೀಲ

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ…

2 hours ago