ಜಿಲ್ಲೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡೈರಿ ಬಿಡುಗಡೆ

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು ಐದು ಸಾವಿರ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 9 ಲಕ್ಷ ಫಲಾನುಭವಿಗಳಿದ್ದಾರೆ. ಅಲ್ಲದೆ, 1.15 ಲಕ್ಷ ಸದಸ್ಯರಿದ್ದಾರೆ. ಇವರಿಗಾಗಿ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಕಾರ್ಯಕ್ರಮಗಳಿದ್ದು, ಗುರುತಿನ ಚೀಟಿ ಪಡೆದವರಿಗೆ ಟ್ರಸ್ಟ್ ಗುರುತಿಸಿದ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಜೊತೆಗೆ ನಿರ್ಗತಿಕರಿಗೆ 500 ರಿಂದ ಎರಡು ಸಾವಿರ ರೂ.ಗಳ ವರೆಗೆ ಮಾಸಾಶನ, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಇದಲ್ಲದೆ ದೇವಸ್ಥಾನ, ಕೆಎಂಎಫ್ ಕಟ್ಟಡಗಳಿಗೆ ನೆರವು ಸೇರಿದಂತೆ ಸಮಗ್ರ ಅಭಿವೃದ್ಧಿಯ ಕೆಲಸ ಕೈಗೊಳ್ಳಲಾಗುತ್ತಿದೆ. ಇದರೊಡನೆ ಅನಾಥ ಮಹಿಳೆಯರಿಗೆ ಒಂದು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಸಂಸ್ಥೆ ನಡೆಸುತ್ತಿರುವ ಮದ್ಯವ್ಯರ್ಜನ ಶಿಬಿರಗಳಿಂದಾಗಿ ನೂರಾರು ಮಂದಿ ಮದ್ಯ ತ್ಯಜಿಸಿದ್ದಾರೆಂದು ಮಾಹಿತಿ ನೀಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್‌, ಮೈಸೂರು ತಾಲ್ಲೂಕು ಯೋಜನಾಧಿಕಾರಿ ನಂದಿನಿ, ಆಡಳಿತ ಯೋಜನಾಧಿಕಾರಿ ಪ್ರಸಾದ್, ಜಿಲ್ಲಾ ಕಚೇರಿಯ ಯೋಜನಾಧಿಕಾರಿ ಮಾಧವ್, ಜಿಲ್ಲಾ ನಿರ್ದೇಶಕರಾದ ಎಂ. ಲಕ್ಷ್ಮಣ್, ಮೇಲ್ವಿಚಾರಕರಾದ ಕುಸುಮಾ, ಶಶಿಕಲಾ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

3 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

4 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

19 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

22 hours ago