Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾ.ನಗರ : ಮಳೆಹಾನಿ ಪರಿಹಾರಕ್ಕೆ SDPI ಒತ್ತಾಯ!

ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಹೇಶ್ ಗಾಳಿಪುರ ಒತ್ತಾಯಿಸಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು ಕೋಡಿ ಬಿದ್ದಿವೆ, ಹಲವಾರು ಗ್ರಾಮಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಗೋಡೆಗಳು ಕುಸಿದಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ಸಾಕಷ್ಟು ಕಡೆಗಳಲ್ಲಿ ಪ್ರಾಣ ಹಾನಿಯೂ ಸಂಭವಿಸಿದೆ.

ಆದರೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದೆ, ಸೂಕ್ತ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯ ಪರಿಸ್ಥಿತಿ ಅರಿತುಕೊಂಡು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ  ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!