ಜಿಲ್ಲೆಗಳು

ರಾಜಕಾರಣದ ತಾಳಕ್ಕೆ ಕುಣಿದು ದಸರಾ ಘನತೆ ಕುಗ್ಗಿಸಿದ ಜಿಲ್ಲಾಡಳಿತ: ಕೆ.ವಿ.ಮಲ್ಲೇಶ್

ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಗಂಭೀರತೆ ಪಡೆದುಕೊಂಡಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕಾಗಿ ಸರಳ ದಸರಾ ಮಾಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ದಸರಾ ಎಂಬ ಘೋಷಣೆ ಮಾಡಿದ್ದುದು ಸರಿ. ಆದರೆ, ಈ ಹಿನ್ನೆಲೆಯಲ್ಲಿ ನಡೆದ ಅವಾಂತರದ ಹೊಣೆಯನ್ನು ದಸರಾ ವಿಶೇಷಾಧಿಕಾರಿಗಳೇ ಆದ ಜಿಲ್ಲಾಧಿಕಾರಿಗಳೇ ಹೊರಬೇಕು ಎಂದು
ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪಾಸ್ ನೀಡುವ ಸಂದರ್ಭದಲ್ಲಿ ಅಳೆದು-ತೂಗಿ ಸೀಮಿತ ಮಂದಿಗಷ್ಟೇ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕಡಲೆಪುರಿ ಹಂಚಿದಂತೆ ಪಾಸ್‌ಗಳನ್ನು ಹಂಚಿದ ಪರಿಣಾಮ ಜಂಬೂಸವಾರಿ ವೇಳೆ ಇನ್ನಿಲ್ಲದ ಸಮಸ್ಯೆ ಸೃಷ್ಟಿಯಾಗಿತ್ತು. ಇದಕ್ಕೆ ಜಿಲ್ಲಾಧಿಕಾರಿಗಳೇ ನೇರ ಕಾರಣಕರ್ತರು ಎಂದಿದ್ದಾರೆ.

ಅಂಬಾರಿ ಹೊತ್ತ ಆನೆ ಪುಷ್ಪಾರ್ಚನೆ ಜಾಗಕ್ಕೆ ಬರಲು ಪರದಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದುದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ದೊಡ್ಡ ವೈಫಲ್ಯ. ಸಾರ್ವಜನಿಕ ಮಹೋತ್ಸವವಾಗಬೇಕಾದ ದಸರಾ ಜಂಬೂಸವಾರಿ ಕಾರ್‍ಯಕ್ರಮ ಕೇವಲ ಪಕ್ಷವೊಂದರ ಕಾರ್‍ಯಕ್ರಮದಂತೆ ಬಿಂಬಿತವಾಗಿದ್ದುದು, ಬಿಜೆಪಿ ಕಾರ್‍ಯಕರ್ತರೇ ಎಲ್ಲೆಡೆ ಆವರಿಸಿಕೊಂಡಿದ್ದುದು ನಾಚಿಕೆಗೇಡಿನ ಸಂಗತಿ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದಸರಾ ಮಹೋತ್ಸವದ ಬಂದೋಬಸ್ತ್‌ಗಾಗಿ ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದರೂ, ಅಂಬಾರಿ ಸಾಗುವ ಮಾರ್ಗದಲ್ಲಿ ತುಂಬಿದ್ದ ಸಾರ್ವಜನಿಕರನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಅತ್ಯಂತ ನೋವಿನ ವಿಚಾರ ಎಂದಿದ್ದಾರೆ.

ದಸರಾ ಮಹೋತ್ಸವದ ವೇಳೆ ಪಾಸ್ ಮುದ್ರಿಸಿ ಹಂಚುವುದು ಸರ್ವೇ ಸಾಮಾನ್ಯ. ಆದರೆ, ಮುದ್ರಿಸಲಾದ ಪಾಸ್‌ಗಳ ಪೈಕಿ ಹತ್ತು ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಸ್ವಕ್ಷೇತ್ರ ಯಶವಂತಪುರಕ್ಕೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಮಾಧ್ಯಮಗಳ ಮೂಲಕ ಜಗಜ್ಜಾಹಿರಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರು ಜನತೆಗೆ ಮಾಡಿದ ಪರಮದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಅಧಿಕಾರಿ ವರ್ಗಕ್ಕೆ ಸರ್ಕಾರ ಹಾಗೂ ಆಡಳಿತಾರೂಢ ಪಕ್ಷದ ಒತ್ತಡ ಇರುವುದು ಸಹಜ. ಆದರೆ, ಅಧಿಕಾರಿಗಳು ತಮ್ಮ ಇತಿಮೀತಿ ಅರಿಯದೆ, ಕಾನೂನು ಪಾಲಿಸದೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದುದೇ ಜಂಬೂಸವಾರಿ ವೇಳೆ ಆದಂತಹ ಎಲ್ಲ ದುರಂತಗಳಿಗೆ ಕಾರಣ ಎಂದಿದ್ದಾರೆ.

ಜಂಬೂಸವಾರಿಯ ಎಲ್ಲ ಅವಾಂತರಗಳ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೂಡಲೇ ಮೈಸೂರು ಜನತೆ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago