Mysore
18
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ನವ್ಯಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಡ್ಯ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ನಗರದ ಲಕ್ಷಿö್ಮಜನಾರ್ದನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ೭ ತಾಲ್ಲೂಕುಗಳಿಂದ ೭ ಸ್ಪರ್ಧಿಗಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಪಡೆದಳು.

ನವ್ಯಶ್ರೀ ಅವರು `ಆಂದೋಲನ’ ಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ, ತಾಲ್ಲೂಕಿನ ಹೊಸಬೂದನೂರು ಗ್ರಾಮದ ಬಿ.ಟಿ. ಮೋಹನ್ ಕುಮಾರ್ ಮತ್ತು ಎಂ.ಆರ್.ಜ್ಯೋತಿ ಅವರ ಪುತ್ರಿಯಾಗಿದ್ದು, ಕಳೆದ ೯ ವರ್ಷದಿಂದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ, ವಿದುಷಿ ಚೇತನಾ ರಾಧಾಕೃಷ್ಣ ಅವರ ಬಳಿ ಭರತನಾಟ್ಯ ಕಲಿಯುತಿದ್ದಾರೆ.

ಇವರ ಸಾಧನೆಗೆ ಸಂತ ಜೋಸೆಫರ ಶಾಲೆ ಪ್ರೌಢಶಾಲೆಯ ಶಿಕ್ಷಕ ವೃಂದ ಮತ್ತು ವಿದುಷಿ ಚೇತನಾ ರಾಧಾಕೃಷ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!