ಜಿಲ್ಲೆಗಳು

ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಆರೋಗ್ಯ ಶಿಬಿರ

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂದರ್ಭವನ್ನು ಉತ್ತಮವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ವಿಶ್ವ ನಾಯಕ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷಣ್ ಜೀ ಪ್ರಶಂಸಿಸಿದರು. ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ ಮಂಟಪ ಸಮೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನಲೆ ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್ ಅವರು ಆಯೋಜಿಸಿದ್ಧ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರ 72ನೇ ಹುಟ್ಟು ಹಬ್ಬದ ಹಿನ್ನಲೆ ರಾಷ್ಟ್ರವ್ಯಾಪಿ ಸೆ.17 ರಿಂದ ಅ.2 ರವೆರೆಗೆ ಸೇವಾ ಪ್ರಾಕ್ಷಿಕೆ ಕಾರ್ಯಕ್ರಮದಡಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿರುವುದು ಮೆಚ್ಚುಗೆ ಸಂಗತಿ. ಇದರಿಂದ ಜನತೆಗೆ ಆರೋಗ್ಯ ಸೇವೆ ಒದಗಿಸಿದಂತಾಗಿದೆ. ಮೋದಿ ಅವರು ಜನಧನ್, ಆಯುಷ್ಮಾನ್ ಭಾರತ, ಆರೋಗ್ಯ ಭೀಮಾ, ಉಜ್ವಲ ಯೋಜನೆ, ಕೃಷಿ ಸಮ್ಮಾನ್ ಸೇರಿದಂತೆ ಇನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಗಳಿಸಿದ್ದಾರೆ. ಕೋವಿಡ್ ಸಂದರ್ಭವನ್ನು ಸಮರ್ಪಕವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣದ ಪಣ ತೊಟ್ಟಿದ್ದಾರೆ. ಈ ವೇಳೆ ಜನಪ್ರತಿನಿಧಿಗಳು ಅದರಲ್ಲೂ ಪಕ್ಷದ ಕಾರ್ಯಕರ್ತರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಹಗಲಿರುಳು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್‍ನಲ್ಲಿ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ. ಈತನ್ಮಧ್ಯೆ ಜನರನ್ನು ದಿಕ್ಕು ತಪ್ಪಿಸುವ ಸಲುವಾಗಿ ರಾಹುಲ್‍ಗಾಂಧಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಜೋಡೋ ಪಾದಯಾತ್ರೆ ಬರಿ ನೆಪ ಎಂದು ಆರೋಪಿಸಿದರು.

ವಾಟಾಳ್ ಸೂರ್ಯ ಸಿಂಹಾಸನದ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ, ಸಮಾಜ ಸೇವೆ ಒದಗಿಸುವ ಸಲುವಾಗಿ ವೆಂಕಟೇಶ್ ಅವರು ತುರ್ತು ವಾಹನ ಸೌಲಭ್ಯ, ಕುಡಿಯುವ ನೀರಿನ ಸಮಸ್ಯೆ ತಲೆದೂರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ, ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ. ಇದೀಗ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನಲೆ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದು ಮೆಚ್ಚುವಂತದ್ದು ಎಂದರು. ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 8 ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು,ಕ್ಷೇತ್ರದ ಪ್ರತಿಯೊಬ್ಬರ ಹಿತ ಕಾಪಾಡುವುದೇ ನನ್ನ ಗುರಿ ಎಂದು ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಇದೇ ವೇಳೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪರೀಕ್ಷೆಗೆ ಒಳಗಾಗಿ ನ್ಯೂನತೆಯುಳ್ಳವರಿಗೆ ಗಾಲಿ ಕುರ್ಚಿ, ಶ್ರವಣ ಸಾಧನ ಹಾಗೂ ಕನ್ನಡಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಅರುಣ, ರಾಜ್ಯಾಧ್ಯಕ್ಷ ನೆ.ಲ ನರೇಂದ್ರಬಾಬು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ಮುಡಿಗುಂಡ ಮಠದ ಶ್ರೀಕಂಠಸ್ವಾಮೀಜಿ, ಹೊಂಡರಬಾಳು ಪಟ್ಟದ ಮಠದ ಪ್ರಸನ್ನಾನಂದ ಸ್ವಾಮೀಜಿ, ಶಾಸಕ ಎನ್.ಮಹೇಶ್, ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸುಂದರ್, ಉಪಾಧ್ಯಕ್ಷ ಡಾ.ಎಸ್.ದತ್ತೇಶ್‍ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago