ಮೈಸೂರು: ಡಿಕೆ ಶಿವಕುಮಾರ್ ನೀಡಿದ್ದ ಸೆಟಲ್‌ಮೆಂಟ್ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಡಿಕೆ ಶಿವಕುಮಾರ್ ಸಿನಿಮಾ ಸ್ಟೈಲ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್‌ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್‌ಮೆಂಟ್ ಆಗುತ್ತೆ. ನೋಡ್ತಾ ಇರಿ ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ, ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜತೆ ಹೋಲಿಸಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ ದೇಶ ದ್ರೋಹಿ ಹೇಳಿಕೆ ನೀಡಿದ ಡಿಕೆ ಸುರೇಶ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೊಟೀಸ್ ಕಳುಹಿಸಿ ರಾಷ್ಟ್ರದ್ರೋಹಿಗಳನ್ನು ರಕ್ಷಣೆ ಮಾಡುತ್ತಾರೆ ಎಂದು ಕಿಡಿಕಾರಿದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…