ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ
ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್‌ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.
ಬಿವಿಎಸ್ ಜಿಲ್ಲಾ ಸಂಯೋಜಕ ಪರ್ವತ್‌ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.
-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…