ಜಿಲ್ಲೆಗಳು

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ

ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್  ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್‌ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.

ಬಿವಿಎಸ್ ಜಿಲ್ಲಾ ಸಂಯೋಜಕ  ಪರ್ವತ್‌ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

8 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

8 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

15 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

15 hours ago