Mysore
23
overcast clouds
Light
Dark

ದೊಡ್ಡಹೆಜ್ಜೂರು: ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಸಾಮಗ್ರಿ ವಿತರಣೆ

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ
ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ
ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್ ಅವರು ಮಾತನಾಡಿ ವೆಂಕಟೇಶ್ ಅವರ ತಂದೆ ದಿವಂಗತ ನಿಂಗೆ ಗೌಡ ಅವರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ಅಂತವರ ಮಕ್ಕಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಶಾಲೆಗೆ  ಸೇವೆ ಮಾಡಲು ಪ್ರಾರಂಭಿಸಿರುವುದು ಸಂಗತಿ ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಇದೇ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು. ಜೊತೆಗೆ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಶ್ರೀಮತಿ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್ ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಾರ್ಯಕ್ರಮದಲ್ಲಿ ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ