ಹುಣಸೂರು: ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು.
ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.
ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್ ಅವರು ಮಾತನಾಡಿ ವೆಂಕಟೇಶ್ ಅವರ ತಂದೆ ದಿವಂಗತ ನಿಂಗೆ ಗೌಡ ಅವರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ಅಂತವರ ಮಕ್ಕಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಶಾಲೆಗೆ ಸೇವೆ ಮಾಡಲು ಪ್ರಾರಂಭಿಸಿರುವುದು ಸಂಗತಿ ಎಂದರು.
ಇದೇ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು. ಜೊತೆಗೆ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಶ್ರೀಮತಿ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…