ಹನೂರು: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದವರಗೆ ಆಗಸ್ಟ್ 25 ರಂದು ನಾಳೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಹನೂರು ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅದೇ ರೀತಿ ಹನೂರು ಬ್ಲಾಕ್ ಕಾಂಗ್ರೆಸ್ ಹಾಗೂ ರಾಮಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ಕಾರ್ಯಕ್ರಮವನ್ನು ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದ ವರೆಗೆ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಕೊಡಗಿನಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಮನವಿ ಮಾಡಿದ್ದಾರೆ.
ಪಾದಯಾತ್ರೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧೃವ ನಾರಾಯಣ್, ಮಾಜಿ ಸಚಿವ ಚೆಲುವರಾಯಸ್ವಾಮಿ, ಚಾ ನಗರ ಉಸ್ತುವಾರಿ ಮಂಜುಳಾ ಮಾನಸ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರುಗಳಾದ ಜಯಣ್ಣ, ಕೃಷ್ಣಮೂರ್ತಿ, ಬಾಲರಾಜು, ಕೆಪಿಸಿಸಿ ಸದಸ್ಯರಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…