ಪಿರಿಯಾಪಟ್ಟಣ: ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಚೇರಿ ಸಿಬ್ಬಂದಿಗಳಿಗೆ ತಹಸಿಲ್ದಾರ್ ಚಂದ್ರಮೌಳಿ ಕಠಿಣ ಎಚ್ಚರಿಕೆ ನೀಡಿದ್ದಾರೆ.
ತಾಲ್ಲೂಕು ಕಚೇರಿಯಲ್ಲಿ ಜನರ ಕೆಲಸ ಕಾರ್ಯ ಮಾಡಿಕೊಡಲು ವಿಳಂಬ ಮಾಡುತ್ತಿರುವ ಮತ್ತು ಕೆಲ ಸಿಬ್ಬಂದಿ ಲಂಚ ಪಡೆಯುತ್ತಾರೆ ಎಂಬ ವಿಷಯದ ಕುರಿತು ಆಂದೋಲನ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾದ ನಂತರ ಎಚ್ಚೆತ್ತುಕೊಂಡ ತಹಸಿಲ್ದಾರ್ ಚಂದ್ರಮೌಳಿ ಅವರು ಬುಧವಾರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಕಚೇರಿಯ ನೌಕರರು ಮತ್ತು ಸಿಬ್ಬಂದಿ ವರ್ಗದವರ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಈಗಾಗಲೇ ತಾಲ್ಲೂಕಿನ ಶಾಸಕರ ಮಾರ್ಗದರ್ಶನದಲ್ಲಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಪ್ರತಿ ಗ್ರಾಮಗಳಲ್ಲಿನ ವೃದ್ಧಾಪ್ಯರಿಗೆ ಆಯಾ ಹೋಬಳಿ ಮಟ್ಟದಲ್ಲಿ ೩೦೦ ರಿಂದ ೪೦೦ ವಿವಿಧ ವೇತನಗಳ ಆದೇಶ ಪ್ರತಿಗಳನ್ನು ನೀಡಲಾಗುತ್ತಿದೆ. ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಆದೇಶದ ಪ್ರತಿಗಳನ್ನು ನೀಡಲಾಗಿದೆ. ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ಶಾಸಕರ ನೇತೃತ್ವದಲ್ಲಿ ೧೫ ದಿನಗಳಿಗೆ ಒಮ್ಮೆ ಸಭೆಗಳನ್ನು ಮಾಡಿ ೧೧೫ ಜನರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ನನ್ನ ಗಮನಕ್ಕೆ ತಾರದೆ ಈ ವಿಚಾರದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಾರದೆಂದು ನೌಕರರು ಮತ್ತು ಸಿಬ್ಬಂದಿ ವರ್ಗದವರಿಗೆ ಎಚ್ಚರಿಕೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಹಣದ ಬೇಡಿಕೆ ಇಡಬಾರದು, ಮಧ್ಯವರ್ತಿಗಳ ಮುಖಾಂತರ ಯಾವುದೇ ವ್ಯವಹಾರಗಳನ್ನು ಮಾಡಕೂಡದು. ಇಂತಹ ಅಕ್ರಮಗಳು ಕಂಡುಬಂದಲ್ಲಿ ಅಥವಾ ನನ್ನ ಗಮನಕ್ಕೆ ಬಂದಲ್ಲಿ ಅಂತಹ ಸಿಬ್ಬಂದಿಗಳನ್ನು ವರ್ಗಾವಣೆ ಅಥವಾ ಕರ್ತವ್ಯದಿಂದ ತೆಗೆದು ಹಾಕಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.
ಕಚೇರಿ ಸಿಬ್ಬಂದಿಗಳು ಗ್ರಾಮಾಂತರ ಪ್ರದೇಶದಿಂದ ಬರುವ ರೈತರನ್ನಾಗಲಿ ಅಥವಾ ವಯೋವೃದ್ಧರನ್ನಾಗಲಿ ಅಥವಾ ಸಾರ್ವಜನಿಕರನ್ನಾಗಲಿ ಅಲೆದಾಡಿಸದೆ ಸಂಬಂಧಪಟ್ಟಂತಹ ವ್ಯಕ್ತಿಗಳಿಗೆ ಸರಿಯಾದ ವಾಹಿತಿಯನ್ನು ನೀಡಿ ಕಳುಹಿಸಬೇಕು. ತುರ್ತಾಗಿ ಕೆಲಸಗಳನ್ನ ಮಾಡಿಕೊಡಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದರು. ಯಾವುದೇ ಒಬ್ಬ ನೌಕರ ಮಾಡಿದ ಅವ್ಯವಹಾರಕ್ಕೆ ಇಡೀ ಕಚೇರಿಯು ಸಿಬ್ಬಂದಿಗಳು ಮತ್ತು ನೌಕರರು ತಲೆತಗ್ಗಿಸುವಂತಾಗಬಾರದು ಎಂದು ಕಚೇರಿಯು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಯಾವುದೇ ರಾಜಸ್ವ ನಿರೀಕ್ಷಕರು ಗ್ರಾಮ ಸಹಾಯಕರನ್ನು ಅತಿ ಹೆಚ್ಚಾಗಿ ನಂಬದೆ ತಾವೇ ಖುದ್ದಾಗಿ ಕೆಲಸವನ್ನು ನಿರ್ವಹಿಸಬೇಕು ಹಾಗೂ ಕೆಲವು ಗ್ರಾಮ ಸಹಾಯಕರು ಗ್ರಾಮಾಂತರ ಪ್ರದೇಶಗಳಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ತಿಳಿದು ಬಂದಿದೆ. ಹಾಗೇನಾದರೂ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಿರಸ್ತೇದಾರ್‌ಗಳಾದ ನಂದಕುಮಾರ್, ಟ್ರೀಜಾ , ದಾಕ್ಷಾಯಿಣಿ, ಕರ್ನಾಟಕ ರಾಜ್ಯ ನೌಕರರ ಸಂಘದ ಮೈಸೂರು ವಿಭಾಗದ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್, ರಾಜಸ್ವ ನಿರೀಕ್ಷಕ ಪಾಂಡುರಂಗ ಮತ್ತು ಸಿಬ್ಬಂದಿ ಹಾಜರಿದ್ದರು.
ನೌಕರರು ಕೆಲಸದ ಅವಧಿಯಲ್ಲಿ ಕಚೇರಿಯಲ್ಲೇ ಇರಬೇಕು. ಸಾರ್ವಜನಿಕರಿಗೆ ಶೀಘ್ರದಲ್ಲೇ ನೀವು ದೊರೆಯುವಂತಿರಬೇಕು. ಕಚೇರಿಯ ಕೆಲಸದ ಸಮುಂದಲ್ಲಿ ವೈಯಕ್ತಿಕ ಕೆಲಸಗಳಿಗೆ ಕಚೇರಿಯಿಂದ ಹೊರಗೆ ಹೋಗಿದ್ದು ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ತೆಗೆದು ಹಾಕಲು ಶಿಫಾರಸು ಮಾಡಲಾಗುವುದು. -ಚಂದ್ರಮೌಳಿ, ತಹಸಿಲ್ದಾರ್
ಈಗಾಗಲೇ ‘ಆಂದೋಲನ’ ದಿನಪತ್ರಿಕೆಯಲ್ಲಿ ಬಂದಂತಹ ವರದಿಯನ್ನು ಗಮನಿಸಿ ತಾಲ್ಲೂಕು ಕಚೇರಿಯ ಅಧಿಕಾರಿಗಳ ಸಭೆಯನ್ನು ಕರೆದು ಭ್ರಷ್ಟಾಚಾರವನ್ನು ನಡೆಸುತ್ತಿರುವಂತಹ ನೌಕರರು ಯಾರಾದರೂ ಕಂಡುಬಂದಲ್ಲಿ ಅವರನ್ನು ಕೆಲಸದಿಂದ ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಭ್ರಷ್ಟರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿಗೆ ಮತ್ತು ಅಧಿಕಾರಿಗಳಿಗೆ ತಿಳಿಸಲಾಗಿದೆ. -ಕೆ.ಮಹದೇವ್, ಶಾಸಕ
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…