Mysore
22
moderate rain
Light
Dark

‘ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಬೇಡ ’

ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.

ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 74 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಸಮವಸ್ತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನುರಿತ ಶಿಕ್ಷಕರಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಹುದ್ದೆಯಲ್ಲಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್, ಗ್ರಾ.ಪಂ ಸದಸ್ಯರಾದ ಪ್ರವೀಣ್, ಸುರೇಶ್‌ಶೆಟ್ಟಿ, ಗಣಪತಿ, ವಿಶ್ವ, ಮುಖ್ಯಶಿಕ್ಷಕಿ ಸುಶೀಲಾ, ಸಹಶಿಕ್ಷಕಿಯರಾದ ಚಿತ್ರಕಲಾ, ಪದ್ಮಾವತಿ ಹಾಜರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ