Mysore
34
few clouds

Social Media

ಮಂಗಳವಾರ, 12 ಮೇ 2026
Light
Dark

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ ಬಾಬು ಜಗಜೀವನ್ ರಾಮ್ ಸಮುದಾಯ ಭವನ ಉದ್ಘಾಟನೆ

ಹನೂರು: ಸಮುದಾಯ ಭವನಗಳು ಸದಾ ಚಟುವಟಿಕೆ ಕೇಂದ್ರಗಳಾಗಬೇಕು, ಮಹಿಳಾ ಸ್ವಸಹಾಯ ಸಂಘದವರು ಭವನದಲ್ಲೇ ತಮ್ಮ ಕಾರ್ಯಚಟುವಟಿಕೆ ನಡೆಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಪಿಜಿಪಾಳ್ಯ, ಹುಣಸೇಪಾಳ್ಯ, ಬೈಲೂರು ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗಿರುವ ಡಾ. ಬಿ ಆರ್ ಅಂಬೇಡ್ಕರ್ ಭವನ ಹಾಗೂ ಡಾ ಬಾಬು ಜಗಜೀವನ್ ರಾಮ್ ಸಮುದಾಯ ಭವನಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 137 ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದೇನೆ. ಸರ್ಕಾರದಿಂದ ಅನುದಾನ ತಂದು ಕಷ್ಟಪಟ್ಟು ಭವನಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಕೆಲವು ಸಮಾಜದವರು ಸಮುದಾಯ ಭವನವನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಕಟ್ಟಡ ನಿರ್ಮಾಣ ಮಾಡಿ ಪಾಳುಬಿಟ್ಟಿರುವುದರಿಂದ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದೆ. ಆದ್ದರಿಂದ ಪ್ರತಿಯೊಬ್ಬರು ಸಮುದಾಯ ಭವನಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳಿಗೆ,ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ,ಸಭೆ ಸಮಾರಂಭಗಳಿಗೆ, ಸರಳ ವಿವಾಹಗಳಿಗೆ ಸಮುದಾಯ ಭವನಗಳ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು .

ಅಂಗನವಾಡಿ ಕೇಂದ್ರ ಉದ್ಘಾಟನೆ : ಪಿ ಜಿ ಪಾಳ್ಯ ಕೇಂದ್ರಸ್ಥಾನದಲ್ಲಿ ತಲಾ ಹತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎರಡು ಅಂಗನವಾಡಿ ಕೇಂದ್ರವನ್ನು ಶಾಸಕ ಆರ್ ನರೇಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ,ಸಿಡಿಪಿಒ ನಾಗೇಶ್, ಪಿಡಿಒಗಳಾದ ಸಿದ್ದಪ್ಪ, ರಾಜು ಮುಖಂಡರುಗಳಾದ ಪಾಪಣ್ಣ,ಜಗದೀಶ್, ಸತೀಶ್,ವೇಲುಸ್ವಾಮಿ, ಶಿವಮಲ್ಲಪ್ಪ ,ಮಹದೇವಸ್ವಾಮಿ,ನಿರ್ಮಿತಿ ಕೇಂದ್ರದ ಅಭಿಯಂತರ ರವಿಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!