ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು.
ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊರೊನಾ ಜನರನ್ನು ಸಾಕಷ್ಟು ಭಯಗೊಳಿಸಿತು. ಆರ್ಥಿಕತೆಯ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮಗಳನ್ನು ಬೀರಿತು. ಆದರೆ, ಸರ್ಕಾರಗಳು ಮಾತ್ರ ಕೊರೊನಾ ಹಿಮ್ಮೆಟಿಸುವಲ್ಲಿ ವಿಫಲವಾದವು, ಇಂತಹ ಸಮಯದಲ್ಲಿ ಕೊರೊನಾ ಸೋಂಕಿತು ಮತ್ತು ಮೃತಪಟ್ಟವರ ಸಂಖ್ಯೆಯ ಅಂಕಿ-ಅಂಶಗಳನ್ನು ಸರಿಯಾಗಿ ನೀಡದೆ ಮುಚ್ಚಿಡಲಾಯಿತು. ಆಸ್ಪತ್ರೆ, ಬೆಡ್, ಔಷಧ ಇತ್ಯಾದಿಗಳಲ್ಲೂ ಭ್ರಷ್ಟಚಾರ ಮಾಡಲಾಯಿತು ಎಂದರು.
ಇಂತಹ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ ಸರ್ಕಾರಗಳಿಗೆ ಚಾಟಿ ಬೀಸುವ ಮೂಲಕ ಸರ್ಕಾರಗಳನ್ನು ಸೂಕ್ತ ರೀತಿಯಲ್ಲಿ ನಡೆಯುವಂತೆ ಎಚ್ಚರಿಸಿತು. ಕೆಲವು ಕ್ರಿಟಿಕ್ ಮಾಧ್ಯಮಗಳು ಸರ್ಕಾರದ ಜೊತೆಗೆ ಯಾವುದೇ ಕಾರಣಕ್ಕೂ ರಾಜಿಯಾಗದೆ ತಮ್ಮ ಕೆಲಸಗಳನ್ನು ಮಾಡಿವು. ಈ ಅಂಶಗಳನ್ನು ವಿಮರ್ಶಾತ್ಮಕವಾಗಿ, ವಿಶ್ಲೇಷಣೆ ಮಾಡಿ ಕೊರೊನಾ ಸೆರಗು ಹಿಡಿದು ಎಂಬ ಅದ್ಬುತ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ವಿದ್ಯಾರ್ಥಿಗಳು ಓದಬೇಕು ಎಂದರು. ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿಶ್ವ ವಿದ್ಯಾಲಯಗಳು ಕಾನಕೂನರನ್ನು ಸೃಷ್ಟಿಸುವ ಕೇಂದ್ರಗಳಾಗಿವೆ. ಅನೇಕ ಪ್ರಾಧ್ಯಾಪಕರು ಪಾಠವನ್ನೂ ಮಾಡದೆ, ಸಂಶೋಧಿಸಿ, ಪುಸ್ತಕಗಳನ್ನು ಬರೆಯದೇ ನಿವೃತ್ತರಾಗಿದ್ದಾರೆ. ಇದು ವಿವಿಗಳ ವ್ಯವಸ್ಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಂತಹವರ ನಡುವೆ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಕಾರ್ಯ ಮಾದರಿಯಾಗಿದೆ. ಸತ್ಯವನ್ನು ಶೋಧಿಸಿ, ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದಾರೆ ಎಂದರು. ಮಂಡ್ಯ ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಿ.ಪ್ರೇಮ್ ಕುಮಾರ್, ಕರಾಮುವಿ ವಿಭಾಗದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಶಿವಕುಮಾರಸ್ವಾಮಿ ಮಾತನಾಡಿದರು. ಲೇಖಕರಾದ ಡಾ.ಡಿ.ಸಿ.ನಂಜುಂಡ ಇದ್ದರು.
ಪೋಟೋ: ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…