ಜಿಲ್ಲೆಗಳು

‘ಮಾನಸ ಪ್ರಶಸ್ತಿಗೆ ಡಾ.ಗೊ.ರು.ಚನ್ನಬಸಪ್ಪ ಭಾಜನ’

ಕೊಳ್ಳೇಗಾಲ: ಮಾನಸೋತ್ಸವದ ಅಂಗವಾಗಿ ೨೦೨೨ ಸಾಲಿನ ಮಾನಸ ಪ್ರಶಸ್ತಿಗೆ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರು ಭಾಜನರಾಗಿದ್ದಾರೆ ಎಂದು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಪ್ರಶಸ್ತಿಯನ್ನು ಡಿ.೩೦ರಂದು ಕಾಲೇಜು ಆವರಣದಲ್ಲಿ ನಡೆಯುವ ಮಾನಸೋತ್ಸವ ಸಮಾರಂಭದಲ್ಲಿ ಚಾ.ನಗರ ಉಸ್ತುವಾರಿ ಸಚಿವ ವಿ.ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಚಾ.ನಗರ ದೀನಬಂಧು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜಿ.ಎಸ್.ಜಯದೇವ ವಹಿಸದ್ದಾರೆ. ಮುಖ್ಯ ಅತಿಥಿಗಳಾಗಿ ಚಾ.ನಗರ ಸೇವಾ ಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ವೆಂಕಟರಾಮ್‌ಜಿ, ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾಸಂಶೋಧನಾಲಯದ ವಿಶ್ರಾಂತ ನಿರ್ದೇಶಕ ಪ್ರೊ.ಶಿವರಾಜಪ್ಪ ವಹಿಸಲಿದ್ದಾರೆ.
ಮಧ್ಯಾಹ್ನ1 ಗಂಟೆ ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿ.31ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿ, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಭಾಗವಹಿಸುವರು. ಜಿಲ್ಲಾಧಿಕಾರಿ ರಮೇಶ್, ಎಎಸ್ಪಿ ಸುಂದರರಾಜು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧ಕ್ಕೆ ಮಿಮಿಕ್ರಿ ಗೋಪಿಯಿಂದ ನಗೆಹಬ್ಬ, ೨.೩೦ಕ್ಕೆ ಗೀತ ರಚನೆಕಾರ ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ಜ.೧ರಂದು ಬೆಳಿಗ್ಗೆ ೯ಕ್ಕೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮರೋಪ ಸವಾರಂಭ ಹಾಗೂ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ವಹಿಸಲಿದ್ದು, ಸಮಾರೋಪ ಭಾಷಣವನ್ನು ಚಾ.ನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾಡಲಿದ್ದಾರೆ ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

46 mins ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

48 mins ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

50 mins ago

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…

52 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಸಮರ್ಥ ಕಾಯ್ದೆ ಪಾಲನಾ ವ್ಯವಸ್ಥೆ ಮುಖ್ಯ

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…

54 mins ago

ಕಾಫಿ ಬೆಳೆಗಾರರ ನಿದ್ದೆಗೆಡಿಸಿದ ದರ ಕುಸಿತ

ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…

1 hour ago