ಕೊಳ್ಳೇಗಾಲ: ಮಾನಸೋತ್ಸವದ ಅಂಗವಾಗಿ ೨೦೨೨ ಸಾಲಿನ ಮಾನಸ ಪ್ರಶಸ್ತಿಗೆ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರು ಭಾಜನರಾಗಿದ್ದಾರೆ ಎಂದು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಪ್ರಶಸ್ತಿಯನ್ನು ಡಿ.೩೦ರಂದು ಕಾಲೇಜು ಆವರಣದಲ್ಲಿ ನಡೆಯುವ ಮಾನಸೋತ್ಸವ ಸಮಾರಂಭದಲ್ಲಿ ಚಾ.ನಗರ ಉಸ್ತುವಾರಿ ಸಚಿವ ವಿ.ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಚಾ.ನಗರ ದೀನಬಂಧು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜಿ.ಎಸ್.ಜಯದೇವ ವಹಿಸದ್ದಾರೆ. ಮುಖ್ಯ ಅತಿಥಿಗಳಾಗಿ ಚಾ.ನಗರ ಸೇವಾ ಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ವೆಂಕಟರಾಮ್‌ಜಿ, ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾಸಂಶೋಧನಾಲಯದ ವಿಶ್ರಾಂತ ನಿರ್ದೇಶಕ ಪ್ರೊ.ಶಿವರಾಜಪ್ಪ ವಹಿಸಲಿದ್ದಾರೆ.
ಮಧ್ಯಾಹ್ನ1 ಗಂಟೆ ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿ.31ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿ, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಭಾಗವಹಿಸುವರು. ಜಿಲ್ಲಾಧಿಕಾರಿ ರಮೇಶ್, ಎಎಸ್ಪಿ ಸುಂದರರಾಜು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧ಕ್ಕೆ ಮಿಮಿಕ್ರಿ ಗೋಪಿಯಿಂದ ನಗೆಹಬ್ಬ, ೨.೩೦ಕ್ಕೆ ಗೀತ ರಚನೆಕಾರ ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.
ಜ.೧ರಂದು ಬೆಳಿಗ್ಗೆ ೯ಕ್ಕೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮರೋಪ ಸವಾರಂಭ ಹಾಗೂ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ವಹಿಸಲಿದ್ದು, ಸಮಾರೋಪ ಭಾಷಣವನ್ನು ಚಾ.ನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾಡಲಿದ್ದಾರೆ ಎಂದು ತಿಳಿಸಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…