ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯಲ್ಲಿ ನಿರುತ್ಸಾಹ ತೋರಿರುವ ಅಧಿಕಾರಿಗಳಿಗೆ ಚಾಟಿ ಬೀಸಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗ ಮಟ್ಟದಲ್ಲಿ ನಮ್ಮ ಕ್ಲಿನಿಕ್ ಕುರಿತ ಪ್ರಗತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸದೆ ಇರುವ ಜಿಲ್ಲೆಗಳ ಡಿಎಚ್‌ಒ, ಆರ್‌ಸಿಎಚ್‌ಗಳಿಗೆ ಪ್ರತಿಯೊಂದು ಕಾರ್ಯಕ್ರಮಗಳ ಕುರಿತು ವಿವರಣೆ ಪಡೆಯುತ್ತಲೇ ತರಾಟೆಗೆ ತಗೆದುಕೊಂಡರು. ತಾಯಿ ಮತ್ತು ಮಗುವಿನ ಸಾವಿನ ಪ್ರಮಾಣ, ಗರ್ಭೀಣಿಯರ ತಪಾಸಣೆ ಮೊದಲಾದ ವಿಚಾರಗಳ ಮಾನದಂಡವನ್ನು ನೋಡಿದರೆ ತೀರಾ ಹಿಂದುಳಿಯಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ ಡಿಎಚ್‌ಒಗಳು ಯಾವ ಮಾನದಂಡಗಳಲ್ಲೂ ಪ್ರಗತಿ ಸಾಧಿಸಿಲ್ಲ. ನೀವು ಜಿಲ್ಲೆಯಲ್ಲಿ ಮುಂದುವರಿಯಬೇಕಾ ಅಥವಾ ಬೇಡವೇ ಎಂಬುದನ್ನು ಒಂದು ವಾರದಲ್ಲಿ ನೀವೇ ನಿರ್ಧರಿಸಿ ಎಂದು ಬಿಸಿಮುಟ್ಟಿಸಿದರು. ಈ ವೇಳೆ ದಕ್ಷಿಣಭಾರತದ ರಾಜ್ಯಗಳ ಪೈಕಿ ಮಹಾರಾಷ್ಟ್ರ,ಆಂಧ್ರಪ್ರದೇಶ,ತಮಿಳುನಾಡು,ಕೇರಳ ರಾಜ್ಯಗಳು ಮುಂಚೂಣಿಯಲ್ಲಿದ್ದರೆ, ಕರ್ನಾಟಕ ಕೊನೆಯಲ್ಲಿರುತ್ತದೆ. ಇದರಿಂದಾಗಿಯೇ ಪ್ರಧಾನಮಂತ್ರಿಗಳು ಪರಿಶೀಲನೆ ಮಾಡುವಾಗ ಕೆಲವನ್ನು ಗುರುತಿಸಿ ಬೇಸರಮಾಡಿಕೊಳ್ಳುತ್ತಾರೆ. ಹಾಗಾಗಿ, ನಾವು ಕೇರಳ ರಾಜ್ಯದ ಮಟ್ಟಿಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.
ಮೈಸೂರು ವಿಭಾಗದ ೮ ಜಿಲ್ಲೆಯಿಂದ ೪೩ ನಮ್ಮ ಕ್ಲಿನಿಕ್ ತೆರೆುಂಲು ಚಿಂತಿಸಲಾಗಿದ್ದು, ಈ ಪೈಕಿ ಮೈಸೂರು ಮತ್ತು ಕೊಡಗಿನಲ್ಲಿ ಮಾತ್ರ ತಲಾ ಒಂದೊಂದು ಕ್ಲಿನಿಕ್ ಉದ್ಘಾಟನೆಗೆ ಸಿದ್ಧವಾಗಿದೆ. ಉಳಿದ ಕಡೆ ಇನ್ನೂ ಪ್ರಗತಿಯಲ್ಲಿದೆ ಎಂದರು.
ಈ ಅಂಕಿ ಅಂಶಗಳನ್ನು ಗಮನಿಸಿದ ಸಚಿವರು, ಕೂಡಲೇ ನವೆಂಬರ್‌ನಲ್ಲಿ ನಮ್ಮ ಕ್ಲಿನಿಕ್ ತೆರೆಯಲು ಸಿದ್ಧತೆ ಮಾಡಿಕೊಳ್ಳಿ. ರಾಜ್ಯಮಟ್ಟದಲ್ಲಿ ಇದಕ್ಕೂ ಚಾಲನೆ ನೀಡಬೇಕು ಎಂದರು. ಇದಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ನವೆಂಬರ್ ಅಂತ್ಯಕ್ಕೆ ಎಲ್ಲಾವೂ ಪೂರ್ಣಗೊಳ್ಳುವ ಸಾಧ್ಯತೆ ಇರುವುದರಿಂದ ಡಿಸೆಂಬರ್‌ನಲ್ಲಿ ಉದ್ಘಾಟಿಸಿದರೆ ಒಳಿತು ಎಂದರು.
ಮೈಸೂರಿನ ಶ್ರೀರಾಂಪುರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆಗೆ ಸಿದ್ಧವಿದ್ದು, ತಾವು ಉದ್ಘಾಟಿಸಬುದು ಎಂದು ಡಿಎಚ್‌ಒ ಡಾ.ಕೆ.ಎಚ್. ಪ್ರಸಾದ್ ಮಾಹಿತಿ ನೀಡಿದರು. ಆದರೆ ಸಚಿವರು ರಾಜ್ಯ ಮಟ್ಟದ ಕಾರ್ಯಕ್ರಮದ ಬಳಿಕವಷ್ಟೇ ಎಲ್ಲವೂ ಆರಂಭವಾಗಲಿ. ಅಲ್ಲಿಯವರೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಚಾಮರಾಜನಗರಕ್ಕೆ ೩ ನಮ್ಮ ಕ್ಲಿನಿಕ್ ಮಂಜೂರಾಗಿದ್ದು, ಖಾಸಗಿ ಕಟ್ಟಡದಲ್ಲಿ ಸ್ಥಳ ಗುರುತಿಸಲಾಗಿದೆ. ಒಂದು ಕ್ಲಿನಿಕ್‌ಗೆ ಮಾತ್ರ ವೈದ್ಯರು ನೇಮಕವಾಗಿದ್ದು, ಮತ್ತೆರಡು ಕಡೆಗೆ ವೈದ್ಯರು ಬೇಕಿದ್ದಾರೆ, ಉಳಿದಂತೆ ಎಲ್ಲವೂ ಸಿದ್ಧವಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು. ವೈದ್ಯರೇ ಇಲ್ಲದೆ ಬೇರೆಲ್ಲವೂ ಇದ್ದರೆ ಏನು ಪ್ರಯೋಜನ ಎಂದು ಸಚಿವರು ಪ್ರಶ್ನಿಸಿದರು.
ಅಲ್ಲದೆ ಯಾವುದೇ ಕಾರಣಕ್ಕೂ ಮೊದಲ ಮಹಡಿಯಲ್ಲಿ ಕ್ಲಿನಿಕ್ ತೆರೆಯಬಾರದು. ನೆಲ ಮಹಡಿುಂಲ್ಲಿಯೇ ಕ್ಲಿನಿಕ್‌ಗಳು ಕಾರ್ಯ ನಿರ್ವಹಿಸಬೇಕು. ಕಟ್ಟಡದ ಒಳಾಂಗಣ ವಿನ್ಯಾಸವು ನಾವು ನೀಡಿದ ಮಾದರಿಯಲ್ಲಿಯೇ ರಚನೆ ಆಗಬೇಕು. ಅಲ್ಲದೆ ಈ ಯೋಜನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಡಿಎಚ್‌ಒಗಳು ಮಾಡಬೇಕು ಎಂದರು.
ಅಲ್ಲದೆ ಇಲಾಖೆ ಅಧಿಕಾರಿಗಳನ್ನು ನಂಬಿಕೊಂಡರೆ ಸರ್ಕಾರದ ಯೋಜನೆ ಜನರಿಗೆ ತಲುಪುವುದಿಲ್ಲ. ಆದ್ದರಿಂದ ಖಾಸಗಿ ಏಜೆನ್ಸಿಯೊಂದನ್ನು ನೇಮಿಸಿ ಪ್ರಚಾರ ಮಾಡಿ ಎಂದು ಸೂಚಿಸಿದರು. ಆಯುಷ್ಮಾನ್ ಭಾರತ್ ಸೇರಿದಂತೆ ವಿವಿಧ ಯೋಜನೆಯ ಸವಲತ್ತು ತಲುಪಿಸಬೇಕು. ತಾಂತ್ರಿಕ ಸಮಸ್ಯೆಯ ನೆಪ ಹೇಳಿಕೊಂಡು ಕೂರಬಾರದು. ಮೈಸೂರಿನಲ್ಲಿ ಇಂಟರ್‌ನೆಟ್‌ನ ಅಂತಹ ಸಮಸ್ಯೆ ತಲೆದೋರುತ್ತದೆ ಎನಿಸುವುದಿಲ್ಲ ಎಂದು ಅವರು ಹೇಳಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಗರ್ಭೀಣಿಯರ ನೋಂದಣಿ ಮತ್ತು ತಪಾಸಣೆಗೆ ಅಜಗಜಾಂತರ ವ್ಯತ್ಯಾಸ, ತಾಯಿ ಮತ್ತು ಮಗುವಿನ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ ಇರುವ ಕುರಿತು ಪ್ರಶ್ನೆ ಮಾಡಿದಾಗ ಬುಡಕಟ್ಟು ಜನರು ಹೆಚ್ಚಿರುವ ಕಾರಣ ವ್ಯತ್ಯಾಸವಿದೆ ಎಂದು ಸಬೂಬು ಹೇಳಿದರು.
ಇದಕ್ಕೆ ತೃಪ್ತರಾಗದ ಸಚಿವರು ನೀವು ಸರಿಯಾಗಿ ಕೆಲಸ ಮಾಡಬೇಕು. ನೋಂದಣಿ ಮಾಡಿಸಿದ ಮೇಲೆ ತಪಾಸಣೆಗೆ ಒಳಗಾಗುವಂತೆ ಮಾಡಬೇಕು. ಎಎನ್‌ಸಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಬೇಕು.ಆರ್‌ಸಿಎಚ್‌ಗಳು ಶಿಫಾರಸ್ಸು ಮಾಡಿಸಿ ಬರುತ್ತಾರೆ. ಆದರೆ, ಕೆಲಸದಲ್ಲಿ ಮಾತ್ರ ಆಸಕ್ತಿ ತೋರಲ್ಲ ಎಂದು ಕಿಡಿಕಾರಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ಡಿ.ರಂದೀಪ್,ಎನ್‌ಎಚ್‌ಎಂ ಅಭಿಯಾನ ನಿರ್ದೇಶಕಿ ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕಿ ಡಾ.ಇಂದುಮತಿ,ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿದೇವಿ, ವಿಭಾಗೀಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ ಇನ್ನಿತರರು ಹಾಜರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಮೆಡಿಕಲ್ ಕಾಲೇಜಿನ ಡೀನ್‌ಗಳು, ಆರ್‌ಸಿಎಚ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್,ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ಡಿ.ರಂದೀಪ್,ಎನ್‌ಎಚ್‌ಎಂ ಅಭಿಯಾನ ನಿರ್ದೇಶಕಿ ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕಿ ಡಾ.ಇಂದುಮತಿ, ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿದೇವಿ ಇನ್ನಿತರರು ಹಾಜರಿದ್ದರು.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…