Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಗೆ ಡಾ.ಎಸ್.ಕೃಷ್ಣಪ್ಪ ಕಿತ್ತೂರ್ ಆಯ್ಕೆ

ಮೈಸೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಗೆ ಮೈಸೂರಿನ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಕೃಷ್ಣಪ್ಪ ಕಿತ್ತೂರ್ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಮತ್ತು ತಾಲೂಕು ಘಟಕ ಸಂಯುಕ್ತ ಆಶ್ರಯದಲ್ಲಿ ಜನವರಿ 29ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆಯುವ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಹಾಗೂ ರಾಜ್ಯಮಟ್ಟದ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಾಂಸ್ಕೃತಿಕ ಯುವ ವೈಭವ ಕಾರ್ಯಕ್ರಮ ಜರುಗಲಿದ್ದು ಇವರ ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದರ ರಾಜ್ಯ ಸದ್ಭಾವನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!