ಜಿಲ್ಲೆಗಳು

ನಾಳೆ ಡಾ.ವಿಷ್ಣು ಸ್ಮಾರಕ ಲೋಕಾರ್ಪಣೆ

ಜಿಲ್ಲಾಧಿಕಾರಿಗಳಿಂದ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

ಮೈಸೂರು: ಹದಿಮೂರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಅಭಿನಯ ಭಾರ್ಗವ, ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್’ ಸ್ಮಾರಕ ನಿರ್ಮಾಣವಾಗಿದ್ದು, ಜ.29ರಂದು (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ದಿನವನ್ನು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಲು ಅಭಿಮಾನಿಗಳು ಮುಂದಾಗಿದ್ದಾರೆ.

ಅನೇಕ ಎಡರು-ತೊಡರುಗಳ ನಡುವೆ ಅಂತಿಮವಾಗಿ ಮೈಸೂರಿನ ಉದ್ದೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ.

ಲೋಕಾರ್ಪಣೆಗೆ ಸಿದ್ಧವಾಗಿರುವ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ಶುಕ್ರವಾರ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಲೋಪವಾಗದಂತೆ ಕಾರ್ಯಕ್ರಮದ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಧಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ವ್ಯವಸ್ಧೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಜರಿದ್ದರು.

 

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

5 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

5 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

5 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

5 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

6 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

6 hours ago