ಜಿಲ್ಲೆಗಳು

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದೂರು ದಾಖಲು

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ; ಮೈಸೂರಿನಲ್ಲಿ ಪ್ರಕರಣ ದಾಖಲು

ಮೈಸೂರು :  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆದರಿಸಿ ನಜರಬಾದ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆ ಇದೆ.

ದೂರು ಏನು?

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡರ್ ಅವರೇ ನಮ್ಮನ್ನು ಕಳಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.

ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರು ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು.

ವಿಸ್ತೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಎಚ್ ಟಿ ಕಮಲಾ ಅವರು ರಜೆ ಇದ್ದುದರಿಂದ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾ ಕುಮಾರಿ ವಿಚಾರಣೆ ನಡೆಸಿದರು.

andolanait

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

25 mins ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

37 mins ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

41 mins ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

47 mins ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

1 hour ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago