ಜಿಲ್ಲೆಗಳು

ರಸ್ತೆ, ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ ಎಂದು ಘೋಷಣೆ ಕೂಗಿದರು.
ಗ್ರಾ.ಪಂ.ಅಧ್ಯಕ್ಷ ಮಹೇಂದ್ರ ಮಾತನಾಡಿ, ಗ್ರಾಮದ ನಾಯಕರ ರಾಜಬೀದಿಯಲ್ಲಿ ರಸ್ತೆ, ಚರಂಡಿ ಹಾಳಾಗಿದ್ದು, ಗ್ರಾಮಸ್ಥರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಇದು ಗ್ರಾಮದ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯನ್ನು ದುರಸ್ಥಿಪಡಿಸಿಕೊಡುವಂತೆ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮಾಜಿ ಶಾಸಕರಾದ ವಾಟಾಳ್‌ನಾಗರಾಜ್ ಅವರ ಅವಧಿಯಲ್ಲಿ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಈಗ ಡಾಂಬರು ಕಿತ್ತುಹೋಗಿದ್ದು, ಜೆಲ್ಲಿಕಲ್ಲುಗಳು ಮೇಲಕ್ಕೆದ್ದು ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ನಮ್ಮ ಬೀದಿಯ ಅಭಿವೃದ್ದಿಯನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳು ನಮ್ಮನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೇ ಹೊರತು ನಮ್ಮ ಬೀದಿಯ ರಸ್ತೆ, ಚರಂಡಿ ನಿರ್ಮಾಣಕ್ಕೆ ಯಾವುದೇ ಅನುದಾನ ನೀಡಿಲ್ಲ. ತಕ್ಷಣದಲ್ಲೇ ಈ ರಸ್ತೆ ಅಭಿವೃದ್ದಿ ಪಡಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯರಾದ ಬಿ.ಮಾದೇಶ್, ಪುಟ್ಟಸ್ವಾಮಿ, ಮಲ್ಲೇಶ್, ಯಜಮಾನರಾದ ಶೇಷನಾಯಕ, ಕತ್ತಿನಾಯಕ, ವೀರಣ್ಣನಾಯಕ, ರಾಜಣ್ಣನಾಯಕ, ಮುಖಂಡರಾದ ಕೆಂಪನಾಯಕ, ಡಿ.ಸ್ವಾಮಿ, ಶೋಭ, ಭಾಗ್ಯಮ್ಮ, ರಾಜೇಶ್ವರಿ, ಪುಟ್ಟಸಿದ್ದಮ್ಮ, ಚಿಕ್ಕಮ್ಮ, ಮಹದೇವಮ್ಮ ಇತರರಿದ್ದರು.

andolanait

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

2 hours ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

2 hours ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

2 hours ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

2 hours ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

2 hours ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

2 hours ago