Light
Dark

ಮೈಸೂರು : ಚಿತ್ರಕಲಾ ಸ್ಪರ್ಧೆಯಲ್ಲಿ ಗೆದ್ದರೆ 10 ಸಾವಿರ ರೂ ಬಹುಮಾನ!

ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತರಿಗೆ ಪ್ರಶಸ್ತಿ ಪತ್ರದೊಂದಿಗೆ 10,000 ನಗದು ಬಹುಮಾನ ನೀಡಲಾಗುವುದು ಎಂದು ಪ್ರಾಂಶುಪಾಲರಾದ ಶಿಲ್ಪ ಪ್ರಶಾಂತ್ ಅವರು ತಿಳಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9108002966, ದೂರವಾಣಿ ಸಂಖ್ಯೆ 0821-2340041 ಗೆ ಸಂಪರ್ಕಿಸಬಹುದು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ