Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ನಕಲಿ ರಸಗೊಬ್ಬರ ಮಳಿಗೆಯನ್ನು ಸೀಜ್ ಮಾಡಿದ ಅಧಿಕಾರಿಗಳು

ಮೈಸೂರು : ಅಕ್ರಮವಾಗಿ ರಸಗೊಬ್ಬರ ಶೇಖರಣೆ ಮಾಡಿದ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಗರದ ಆರ್ ಬಿ ಐ ಕಾಲೋನಿಯಲ್ಲಿ ನಡೆದಿದೆ.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಹಾಗೂ ಮೇಟಗಳ್ಳಿ ಪೊಲೀಸರು ಮಳಿಗೆಯ ಮೇಲೆ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ 450 ಚೀಲ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

ಸದ್ಯ ಮಳಿಗೆಯನ್ನು ಸೀಜ್ ಮಾಡಿದ್ದು, ಮಳಿಗೆ ಯಾರದು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಉಪ ನಿರ್ದೇಶಕ ಡಾ.ರಾಜು, ಸಹಾಯಕ ಕೃಷಿ ನಿರ್ದೇಶಕರಾದ ಎಚ್ ಬಿ ಮಧುಲತಾ, ಜಾಗೃತಾ ಕೋಶದ ಸಹಾಯಕ ಕೃಷಿ ನಿರ್ದೇಶಕ ಕೃಷ್ಣ, ಅಧಿಕಾರಿಗಳಾದ ಜೀವನ್ ಕಾರ್ತಿಕ್ ಇದ್ದರು. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ