ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು.
ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ೧೫ನೇ ವರ್ಷದ ಆುುಂಧ ಪೂಜೆ ಅಂಗವಾಗಿ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಉತ್ಸವಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಯಾವುದೇ ಅತಂಕಗಳಿಲ್ಲದೆ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ಆಯುಧ ಪೂಜೆ ನಾಡಹಬ್ಬ ದಸರಾ ಹಿಂದೂ ಸಂಸ್ಕೃತಿಯ ಹಬ್ಬವಾಗಿದ್ದು, ಕೊಡಗಿನ ಎಲ್ಲಾ ಕಡೆಗಳಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ದೇವರು ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ನೀಡುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಬಿಜೆಪಿ ತೇಲಪಂಡ ಶಿವಕುವಾರ್ ಮಾತನಾಡಿದರು. ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘದ ಅಧ್ಯಕ್ಷ ಕುಂಬೆಯಂಡ ಸುರೇಶ್ ದೇವಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ನಿವೃತ್ತ ಸೈನಿಕ ಪಟ್ಟಚೇರಿರ ಪೂಣಚ್ಚ, ಚೆಂಬೆಳ್ಳೂರು ಗ್ರಾಪಂ ಸದಸ್ಯ ವಿ.ಪಿ.ಡಾಲು, ವಿನಾಯಕ ಟೂರ್ಸ್‌ನ ಬಿ.ವಿ.ಹೇಮಂತ್, ಉದ್ಯಮಿ ವಿ.ಎನ್.ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಹಿರಿಯ ಕಾರ್ಮಿಕರಿಗೆ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ವಿದುಷಿ ಹೇಮಾವತಿ ನಾಟ್ಯಂಜಲಿ ನೃತ್ಯ ಸಂಸ್ಥೆ ವಿದ್ಯಾರ್ಥಿಗಳ ತಂಡ ದುರ್ಗಾದೇವಿಯ ನೃತ್ಯ, ಅಮ್ಮತ್ತಿ ರಾಜೇಶ್ ಅವರಿಂದ ಮ್ಯಾಜೀಕ್ ಶೋ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಹಾಗೂ ರಸಮಂಜರಿ ಕಾರ್ಯಕ್ರಮಗಳು ನಡೆಯಿತು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…