ಜಿಲ್ಲೆಗಳು

ದಸರಾ ಕ್ರೀಡಾಕೂಟದ ಅವ್ಯವಸ್ಥೆ: ನೋಟೀಸ್ ಜಾರಿಗೊಳಿಸಿದ ಶಾಲಿನಿ ರಜನೀಶ್

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಕೂಡಲೇ ವರದಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಇಲ್ಲದೇ ಇರುವುದು. ದಸರಾ ಕ್ರೀಡಾಕೂಟದಲ್ಲಿ ಭಾಗಿಯಾದವರಿಗೆ ನಿಗದಿಗಿಂತ ಕಡಿಮೆ ಗೌರವಧನ ನೀಡಲಾಗಿರುತ್ತದೆ. ಅಲ್ಲದೆ, ಕರಾಟೆ, ಬಾಡಿಬಿಲ್ಡಿಂಗ್, ಚೆಸ್, ಅಂಧರ ಚೆಸ್ ಮತ್ತು ಸೈಕಲ್ ಪೋಲೋ ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಿರುವುದಿಲ್ಲ. ಕ್ರೀಡಾಕೂಟಕ್ಕೆ ಸೂಕ್ತ ರೀತಿಯಲ್ಲಿ ಮೈದಾನಗಳನ್ನು ಸಿದ್ಧವಾಗಿಲ್ಲದೇ ಇರುವುದು. ಕ್ರೀಡಾಕೂಟವನ್ನು ಮೊಟಕುಗೊಳಿಸಲಾಗಿರುವುದು. ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ, ಶೂ ವಿತರಿಸಿರುವುದಿಲ್ಲ. ಮ್ಯಾರಥಾನ್ ಕ್ರೀಡೆ ರದ್ದುಗೊಳಿಸಲಾಗಿದೆ. ಬೇರೊಂದು ಸಮಿತಿ ಆಯೋಜಿಸಿರುವ ಯೋಗ ಸ್ಪರ್ಧೆಯನ್ನು ಮತ್ತೊಮ್ಮೆ ಆಯೋಜಿಸಲಾಗಿರುವುದು. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಗೌರವಧನ ನೀಡದೇ ಇರುವುದು. ಕಬ್ಬಡಿ ಕ್ರೀಡೆಯಲ್ಲಿ ಅವ್ಯವಸ್ಥೆ. ಈ ರೀತಿಯಾಗಿ ಅವ್ಯವಸ್ಥೆ ಕುರಿತು ಪಟ್ಟಿ ಮಾಡಿರುವ ಅಪರ ಮುಖ್ಯ ಕಾರ್ಯದರ್ಶಿ ಅವರು, ಇದರಿಂದಾಗಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅನಾನೂಕೂಲವಾಗಿರುತ್ತದೆ ಮತ್ತು ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ. ಆದ್ದರಿಂದ ಈ ಮೇಲಿನ ಅಂಶಗಳ ಬಗ್ಗೆ ನಿಮ್ಮ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ನೋಟಿಸ್‌ನ ಪ್ರತಿಯನ್ನು ಜಂಟಿ ನಿರ್ದೇಶಕರಿಗೂ ನೀಡಲಾಗಿದೆ.

 ದಸರಾ ಕ್ರೀಡಾಕೂಟ ಆಯೋಜಿಸಲು ಸರ್ಕಾರದ ವತಿಯಿಂದ ೫ ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿತ್ತು. ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಯನ್ನು ಗಮನಿಸಿ ನೋಟಿಸ್ ನೀಡಲಾಗಿದೆ.
– ಡಾ.ಶಾಲಿನಿ ರಜನೀಶ್ 

andolana

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

17 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

3 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago