ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ ಕಿರಿಯ ಪುತ್ರ ರಾಗಿರುವ ನಾಗರಾಜ್ ರವರು ಪ್ರಾಥಮಿಕ ಶಿಕ್ಷಣವನ್ನು ಕಣ್ಣೂರು ಗ್ರಾಮದಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ಕೊಳ್ಳೇಗಾಲದ ಎಮ್ ಸಿ ಕೆ ಸಿ ಪ್ರೌಢಶಾಲೆಯಲ್ಲಿ ಪೂರೈಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
2001 ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಇಲಾಖೆಗೆ ನೇಮಕಗೊಂಡು ಪಾವಗಡ, ಬೆಂಗಳೂರು ಹೆಬ್ಬಗೋಡಿ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ, ತುಮಕೂರು ನಗರಗಳಲ್ಲಿ ಸೇವೆ ಸಲ್ಲಿಸಿ 2008ರಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಪಡೆದು ಬೆಂಗಳೂರು ನಗರದ ಮಹಾಲಕ್ಷ್ಮಿ ಪೊಲೀಸ್ ಠಾಣೆ, ಮಾಗಡಿ ರಸ್ತೆ, ಸಂಚಾರಿ ಪೊಲೀಸ್ ಠಾಣೆ, ಹಾರೋಹಳ್ಳಿ, ರಾಮನಗರ ಜಿಲ್ಲೆ ಡಿ ಆರ್ ಸಿ, ಬೆಂಗಳೂರು ಗ್ರಾಮಾಂತರ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ, ಬಿಡಿಎ ಜಾಗೃತಿ ದಳ, ಕುಂಬಳಗೋಡು ಪೊಲೀಸ್ ಠಾಣೆ ಯಲ್ಲಿ ವೃತ ನಿರೀಕ್ಷರಾಗಿ ಸೇವೆ ಸಲ್ಲಿಸಿ 2021ರ ಸಾಲಿನಲ್ಲಿ ಡಿವೈಎಸ್ಪಿ ಯಾಗಿ ಮುಂಬಡ್ತಿ ಹೊಂದಿದ್ದು ಹಾಲಿ ಡಿಜಿ ಮತ್ತು ಐಜಿಪಿ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ 2015 ನೇ ಸಾಲಿನಲ್ಲಿ ಮಾಧ್ಯಮ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ ಇದೀಗ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಇವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…