ಜಿಲ್ಲೆಗಳು

DYSP ನಾಗರಾಜು ಎಸ್ ರವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ ಕಿರಿಯ ಪುತ್ರ ರಾಗಿರುವ ನಾಗರಾಜ್ ರವರು ಪ್ರಾಥಮಿಕ ಶಿಕ್ಷಣವನ್ನು ಕಣ್ಣೂರು ಗ್ರಾಮದಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ಕೊಳ್ಳೇಗಾಲದ ಎಮ್ ಸಿ ಕೆ ಸಿ ಪ್ರೌಢಶಾಲೆಯಲ್ಲಿ ಪೂರೈಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

2001 ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಇಲಾಖೆಗೆ ನೇಮಕಗೊಂಡು ಪಾವಗಡ, ಬೆಂಗಳೂರು ಹೆಬ್ಬಗೋಡಿ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ, ತುಮಕೂರು ನಗರಗಳಲ್ಲಿ ಸೇವೆ ಸಲ್ಲಿಸಿ 2008ರಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಪಡೆದು ಬೆಂಗಳೂರು ನಗರದ ಮಹಾಲಕ್ಷ್ಮಿ ಪೊಲೀಸ್ ಠಾಣೆ, ಮಾಗಡಿ ರಸ್ತೆ, ಸಂಚಾರಿ ಪೊಲೀಸ್ ಠಾಣೆ, ಹಾರೋಹಳ್ಳಿ, ರಾಮನಗರ ಜಿಲ್ಲೆ ಡಿ ಆರ್ ಸಿ, ಬೆಂಗಳೂರು ಗ್ರಾಮಾಂತರ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ, ಬಿಡಿಎ ಜಾಗೃತಿ ದಳ, ಕುಂಬಳಗೋಡು ಪೊಲೀಸ್ ಠಾಣೆ ಯಲ್ಲಿ ವೃತ ನಿರೀಕ್ಷರಾಗಿ ಸೇವೆ ಸಲ್ಲಿಸಿ 2021ರ ಸಾಲಿನಲ್ಲಿ ಡಿವೈಎಸ್ಪಿ ಯಾಗಿ ಮುಂಬಡ್ತಿ ಹೊಂದಿದ್ದು ಹಾಲಿ ಡಿಜಿ ಮತ್ತು ಐಜಿಪಿ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ 2015 ನೇ ಸಾಲಿನಲ್ಲಿ ಮಾಧ್ಯಮ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ ಇದೀಗ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಇವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago