ವರದಿ: ಬಿ.ಎನ್.ಧನಂಜಯಗೌಡ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಮತ್ತು ಪುಂಡು-ಪೋಕರಿಗಳ ಉಪಟಳ ನಿಯಂತ್ರಿಸಲು ಪೊಲೀಸರು ಜಾರಿಗೆ ತಂದಿರುವ ‘ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ’ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಮನೆ ಕಳವು, ಪುಂಡು-ಪೋಕರಿಗಳ ಉಪಟಳ ತಡೆಯಲು ನಗರದಲ್ಲಿ ೧೪೬೮ ಬೀಟ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.
ಪೊಲೀಸ್ ನೈಟ್ ಬೀಟ್ ವ್ಯವಸ್ಥೆ ಸರಿಯಿಲ್ಲ, ಬೀಟ್‌ನಲ್ಲಿರುವ ಪೊಲೀಸ್ ಸಿಬ್ಬಂದಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದಿಲ್ಲ, ವಾರಕ್ಕೊಮ್ಮೆ ಬಂದು ಹಾಜರಾತಿಗೆ ಇಡೀ ವಾರದ ಸಹಿ ಮಾಡುತ್ತಾರೆ ಎಂಬಿತ್ಯಾದಿ ದೂರುಗಳ ಹಿನ್ನೆಲೆಯಲ್ಲಿಯೇ ಒಂದು ವರ್ಷದ ಹಿಂದೆಯೇ ‘ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ’ ಜಾರಿ ಮಾಡಲಾಗಿದೆ.
ಏನಿದು ಇ-ಬೀಟ್ ವ್ಯವಸ್ಥೆ ?: ಎಲೆಕ್ಟ್ರಾನಿಕ್ ಇ-ಬೀಟ್ ವ್ಯವಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಅಭಿವೃದ್ಧಿ ಪಡಿಸಿದ ಆ್ಯಪ್ ಅನ್ನು ಸಿಬ್ಬಂದಿಯ ಮೊಬೈಲ್‌ಗಳಿಗೆ ಅಳವಡಿಸಲಾಗುತ್ತದೆ. ಬೀಟ್‌ನ ನಿಗದಿತ ಪಾಯಿಂಟ್‌ಗೆ ತೆರಳುವ ಪೊಲೀಸ್ ಸಿಬ್ಬಂದಿ ನಿರ್ದಿಷ್ಟ ಪ್ರದೇಶದಲ್ಲಿ ನಿಂತು ಆ್ಯಪ್ ಆನ್ ಮಾಡಬೇಕು. ಒಂದು ವೇಳೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದರೆ, ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಪತ್ತೆಯಾಗುತ್ತದೆ. ಇನ್ನು ಈ ಆ್ಯಪ್ ಮೂಲಕವೇ ಸಿಬ್ಬಂದಿ ಬೀಟ್‌ನಲ್ಲಿ ಇದ್ದಾರಾ, ಇಲ್ಲವಾ ಎಂಬುದನ್ನು ಮೇಲಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬಹುದು.
ಪತ್ತೆ ಪ್ರಕರಣ: ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ ೧೮ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು. ಆರೋಪಿಯು ತನ್ನ ಇನ್ನಿಬ್ಬರು ಸಹಚರರ ಜತೆ ಮೈಸೂರು ನಗರ, ಮೈಸೂರು, ಮಂಡ್ಯ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದನು.
ಈ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೯ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ೧೦.೧೫ ಲಕ್ಷ ರೂ. ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣ, ೮.೩೩೦ ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು, ಏರ್ ಗನ್ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದಿಂದ ವಿಜಯನಗರ ಠಾಣೆ, ಮೇಟಗಳ್ಳಿ ಠಾಣೆ, ಕೆಆರ್‌ಎಸ್ ಠಾಣೆ, ಬೆಂಗಳೂರಿನ ಕುಂಬಳಗೋಡು ಠಾಣೆಯ ತಲಾ ೧ ಪ್ರಕರಣ. ಇಲವಾಲ ಠಾಣೆಯ ೨, ಮೈಸೂರು ದಕ್ಷಿಣ ಠಾಣೆಗೆ ಸಂಬಂಧಿಸಿದ ೩ ಪ್ರಕರಣಗಳು ಪತ್ತೆಯಾದಂತಾಗಿವೆ.
ಹೆಚ್ಚಿನ ಪ್ರಕರಣಗಳು ಎಲ್ಲಿ : ಪ್ರಸ್ತಕ ವರ್ಷ ಜುಲೈವರೆಗೂ ೫೬ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ೧೬ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಶೇ.೫೦ರಷ್ಟು ಕುವೆಂಪುನಗರ, ವಿಜಯನಗರ, ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನುತ್ತವೆ ಪೊಲೀಸ್ ಮೂಲಗಳು.
ಮೈಸೂರಿನಲ್ಲಿ ಅತ್ಯುತ್ತಮವಾದ ಸ್ಮಾರ್ಟ್ ಇ-ಬೀಟ್ ವ್ಯವಸ್ಥೆ ಇದೆ. ಬೀಟ್ ಸಿಬ್ಬಂದಿ ಎಲ್ಲಿ ಹೋಗುತ್ತಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ. ಈ ಸಂಬಂಧ ಬೀಟ್ ಕಮಿಟಿ ಮಾಡಲಾಗಿದೆ. ನಗರದಲ್ಲಿ ಬೀಟ್ ವ್ಯವಸ್ಥೆ ಮೊದಲಿಗಿಂತಲೂ ಉತ್ತಮವಾಗಿದೆ. ಮನೆಗೆ ಬೀಗ ಹಾಕಿಕೊಂಡು ಬೇರೆ ಊರುಗಳಿಗೆ ಹೋಗುವವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು. ಸಹಾಯವಾಣಿ ೧೧೨ಕ್ಕೆ ಕರೆ ಮಾಡಿಯೂ ಮಾಹಿತಿ ನೀಡಬಹುದು. -ಡಾ.ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ, ಮೈಸೂರು
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…