Mysore
22
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಅ.31ವರೆಗೆ ನಿಲ್ದಾಣಗಳಲ್ಲಿ ಏಕತಾ ಸಪ್ತಾಹ

ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು ನಿಲ್ದಾಣಗಳ ಆವರಣದಲ್ಲಿ ಏಕತ ಸಪ್ತಾಹದ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಸಾಧನೆ ಕುರಿತು ಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದು, ಆ ಮೂಲಕ ಭಾರತದ ಏಕತೆ ಮತ್ತು ಸಮಗ್ರತೆಯ ಶಕ್ತಿಯನ್ನು ಪ್ರತಿಬಿಂಬಿಸುವ ಉದ್ದೇಶವನ್ನು ಹೊಂದಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!