ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ.
ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ೫-೭ ದಿನ ಇದೇ ರೀತಿಯ ಸನ್ನಿವೇಶ ಇರಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಚಳಿಗಾಲದ ಅನುಭವ ಕೊಡುವ ಗಡ ಗಡ ನಡುಗಿಸುವ ಚಳಿ ಈಗ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಶುಭ್ರ ಆಕಾಶವಿದ್ದು, ಬೆಳಗ್ಗಿನ ವಿಪರೀತ ಚಳಿ ಸಹಿಸಲಸಾಧ್ಯವಾದಷ್ಟು ಹೆಚ್ಚು ಇರುವ ಅನುಭವ ಆಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಮಧ್ಯ ಅಥವಾ ಕೊನೆಯಲ್ಲಿ ಆರಂಭವಾಗಬೇಕಿದ್ದ ಚಳಿಗಾಲ ಈ ಬಾರಿ ಜನವರಿ ಅಂತ್ಯಕ್ಕೆ ಕಾಣಿಸಿಕೊಂಡಂತಿದೆ.
ಎಲ್‌ನಿನೋ ಎಂದರೇನು?
ಫೆಸಿಫಿಕ್ ಸಾಗರದಲ್ಲಿ ಉಂಟಾಗುವ ಬಿಸಿ ನೀರಿನ ಪ್ರವಾಹಕ್ಕೆ ಎಲ್‌ನಿನೋ ಎನ್ನುತ್ತಾರೆ. ಇನ್ನು ಭಾರತದಲ್ಲಿ ಮಾನ್ಸೂನ್ ಮಳೆ ಪ್ರಮಾಣದಲ್ಲಿ ಕುಸಿತ ಉಂಟಾಗುವುದು ಹಾಗೂ ಬಿಸಿ ಗಾಳಿ ಬೀಸುವುದಕ್ಕೆ ಎಲ್‌ನಿನೋ ಎಂದು ಕರೆಯಲಾಗುತ್ತದೆ.
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…