ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ನಂಜನಗೂಡಿಗೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ ‘ಪಂಚರತ್ನ’ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
‘ಪಂಚರತ್ನ’ ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.
ಹಾಸನ ಟಿಕೆಟ್‌ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಯಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.
ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…
ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ…
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…