ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದರು.
ಅವರು ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಸಂಬoಧ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ನ್ಯೂನತೆಗಳಿದ್ದಲ್ಲಿ ಸರಿಪಡಿಸುವಂತೆ ಎಲ್ಲಾ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂತರ ಜಿಲ್ಲಾ ಗಡಿಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಅದರ ನಿಯಮಗಳಂತೆ ಚೆಕ್ ಪೋಸ್ಟ್ ನಿರ್ಮಿಸಿ ಅಲ್ಲಿನ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಟ್ಟು ನಿಯಮಿತವಾಗಿ ವಾಹನ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ಇಲಾಖೆಗಳ ಸಮನ್ವಯತೆ ಸೆಕ್ಟರ್ ಆಫೀಸರ್‌ಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅತಿ ಮುಖ್ಯವಾಗಿ ಹರಿಯಬೇಕು. ಎಲ್ಲಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಕೈಪಿಡಿ, ಇವಿಎಂ ಅಧಿಕಾರಿಗಳ ಕೈಪಿಡಿ ಹಾಗೂ ಚುನಾವಣಾ ಆಯೋಗದಿಂದ ಬರುವ ಎಲ್ಲಾ ಕೈಪಿಡಿ ಮತ್ತು ಸುತ್ತೋಲೆಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಸಾರ್ವಜನಿಕ ಪ್ರದೇಶಗಳಿಂದ ನಿಗದಿತ ಅವಧಿಯಲ್ಲಿ ತೆರವುಗೊಳಿಸುವಂತೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬ ಪಟ್ಟಿಯನ್ನು ತಯಾರಿಸಿ ವರದಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಎಆರ್‌ಒ ಸುಪ್ರಿಯಾ ಬಣಗಾರ್, ಕೆ.ಆರ್ ನಗರ ಮತ್ತು ಸಾಲಿಗ್ರಾಮದ ತಹಶಿಲ್ದಾರ್ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಉಪಸ್ಥಿತರಿದ್ದರು.
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…