Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಡಿಸಿ ನೇತೃತ್ವದಲ್ಲಿ ನಡೆದ ಚುನಾವಣಾ ದರಪಟ್ಟಿ ಸಭೆ: ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿ ಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬಂದರೆ ತಿಳಿಸಬಹುದು ಎಂದು ತಿಳಿಸಿದರು.

ಫ್ಲೆಕ್ಸ್‌ ಬ್ಯಾನರ್‌ಗಳು ಬ್ಯಾನ್‌:
ಸಾರ್ವಜನಿಕ ಸ್ಥಳಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಗಳ ಅನುಮತಿ ಇಲ್ಲದೇ ಪ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವಂತೆ ಇಲ್ಲ. ಗೋಡೆಗಳ ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಅನುಮತಿ ಇಲ್ಲದೆ ಪ್ಲೆಕ್ಸ್ ಬ್ಯಾನರ್ ಗಳನ್ನು ಮುದ್ರಣ ಮಾಡುವಂತಿಲ್ಲ. ನಿಯಮ ಉಲ್ಲಂಘನೆಗೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೆಸರು ಸೇರಿಸಲು ವಿಶೇಷ ಅಭಿಯಾನ:
ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕಲು ಅವಕಾಶ ಇರುತ್ತದೆ. ವೋಟರ್ ಹೆಲ್ಪ್ ಲೈನ್ ಆಪ್, ಹಾಗೂ ಭೂತ್ ಲೆವೆಲ್ ಅಧಿಕಾರಿಗಳ ಬಳಿ ಸೇರ್ಪಡೆ ಮಾಡಿಸಬಹುದಾಗಿದೆ. ಶಿಕ್ಷಕರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅವಕಾಶ ಇದ್ದು, ಸೇರ್ಪಡೆ ಮಾಡಲು ಜಾಗೃತಿ ಮೂಡಿಸಿ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!