ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ
ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ ಮತ ಯಂತ್ರಗಳು ಸರಬರಾಜಾಗಲಿದೆ.
ಮೈಸೂರು ಜಿಲ್ಲೆಗೆ ೫,೬೩೫ ಬ್ಯಾಲೆಟ್ ಯೂನಿಟ್, ೩,೯೫೮ ಕಂಟ್ರೋಲ್ ಯೂನಿಟ್‌ಗಳು ಇನ್ನೆರಡು ದಿನಗಳಲ್ಲಿ ಬರಲಿವೆ. ಕೇಂದ್ರ ಚುನಾವಣಾ ಆಯೋಗವು ಯಾವುದೇ ರಾಜ್ಯಕ್ಕೆ ಚುನಾವಣೆಗಳು ನಡೆದಾಗ ದೇಶದ ಯಾವುದೇ ರಾಜ್ಯಗಳಿಂದ ಮತ ಯಂತ್ರಗಳನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದರೆ, ಈಗ ಆಯಾ ಜಿಲ್ಲೆಗೆ ನೇರವಾಗಿ ಕಳುಹಿಸುವ ಕೆಲಸ ಮಾಡುತ್ತಿದೆ. ಹೈದರಾಬಾದ್‌ನಲ್ಲಿರುವ ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ(ಇಸಿಐ)ನಿಂದ ಮತ ಯಂತ್ರಗಳನ್ನು ತಯಾರು ಮಾಡಲಾಗುತ್ತಿದೆ. ಅಲ್ಲಿಂದ ನೇರವಾಗಿ ಮೈಸೂರಿಗೆ ತರಲಾಗುತ್ತಿರುವುದು ವಿಶೇಷ.
ಮುಡಾ ಆಯುಕ್ತರ ತಂಡ ನೇತೃತ್ವ: ಹೈದ್ರಾಬಾದ್‌ನಿಂದ ಕಂಟೇನರ್‌ನಲ್ಲಿ ಮತಯಂತ್ರಗಳನ್ನು ತರಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ತಂಡ ಪಯಣ ಬೆಳೆಸಿದೆ. ಕಂಟೇನರ್ ಜತೆಗೆ ಆಯುಕ್ತರ ತಂಡ, ಜಿಪಿಎಸ್ ಹೊಂದಿರುವ ಎಸ್ಕಾರ್ಟ್‌ನೊಂದಿಗೆ ಹತ್ತು ಮಂದಿ ಪೊಲೀಸರು ಭದ್ರತೆಯ ಹೊಣೆ ಹೊತ್ತಿದ್ದಾರೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ ಭಾನುವಾರದ ಹೊತ್ತಿಗೆ ಕಂಟೇನರ್ ಬರುತ್ತಿದ್ದಂತೆ ಪರಿಶೀಲಿಸಿ ಇವಿಎಂ ವೇರ್‌ಹೌಸ್‌ನಲ್ಲಿ ಇಡಲಾಗುತ್ತದೆ ಎಂದು ಹೇಳಲಾಗಿದೆ.
ಹೊಸ ಮಷಿನ್: ಈ ಬಾರಿ ಹೊಸ ಎಂ ೩ ಹೆಸರಿನ ಮಾದರಿ ಮತ ಯಂತ್ರಗಳು ಚುನಾವಣೆಯಲ್ಲಿ ಬಳಕೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಹೈದ್ರಾಬಾದ್‌ನಲ್ಲಿರುವ ಇಸಿಐ ಕಂಪೆನಿಯವರು ತಯಾರು ಮಾಡಿದ್ದಾರೆ. ಈ ಯಂತ್ರದ ವಿಶೇಷತೆ, ಬ್ಯಾಲೆಟ್, ವಿವಿ ಬ್ಯಾಲೆಟ್ ಕುರಿತು ನಿಖರತೆ ಇರುತ್ತದೆ. ಚುನಾವಣೆ ಹೊತ್ತಿಗೆ ರಾಜಕೀಯ ಪಕ್ಷಗಳ ಸಭೆ ಕರೆದು ಇದರ ಬಗ್ಗೆ ಡೆಮೋ ನೀಡಲಾಗುತ್ತದೆ. ಅಲ್ಲಿಯವರೆಗೂ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…
ಪ್ರಶಾಂತ್ ಎಸ್. ಕೆಎಸ್ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…