Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಕೇಬಲ್‌ ಆಪರೇಟರ್‌ ಸಾವು

ಮೈಸೂರು: ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕೇಬಲ್ ಆಪರೇಟರ್ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ.
ನಂಜನಗೂಡು ತಾಲ್ಲೂಕಿನ ಆಲತ್ತೂರು ಗ್ರಾಮದ ಕೇಬಲ್ ಆಪರೇಟರ್ ಕೇಬಲ್ ಸತೀಶ್(೪೬) ಸಾವನ್ನಪ್ಪಿದವರು.
ಬುಧವಾರ ರಾತ್ರಿ ಅಗ್ರಹಾರದ ಉತ್ತಾರದಿಮಠದ ರಸ್ತೆಯಲ್ಲಿ ತಮ್ಮ ಬೈಕ್‌ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಈ ಸಂಬಂಧ ನಗರದ ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ