Mysore
34
scattered clouds

Social Media

ಮಂಗಳವಾರ, 12 ಮೇ 2026
Light
Dark

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಫಸಲು ನಾಶ

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ.

ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು,  ಕಟಾವಿನ ಹಂತಕ್ಕೆ ಬಂದಿತ್ತು. ಆದರೆ ಮಧ್ಯಾಹ್ನ 12ರ ವೇಳೆಯಲ್ಲಿ ಜಮೀನಿನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಯ ಸಾರ್ಟ್ ಸರ್ಕ್ಯೂಟ್ ನ  ಬೆಂಕಿಯು ತೆಂಗಿನ ಮರದ ಗರಿಗೆ ತಗುಲಿ ಜಮೀನಿಗೆ ಬಿದ್ದಿದೆ. ಪರಿಣಾಮ ಕಬ್ಬಿನ ಫಸಲನ್ನು ಆವರಿಸಿದೆ. ಈ ಬಗ್ಗೆ ಕೇಶವಮೂರ್ತಿ ಕೂಡಲೇ ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಲಾಗಿ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಪ್ರಶಾಂತ್‍ನಾಯಕ್, ಸಿಬ್ಬಂದಿಗಳಾದ ಕೆ.ರವಿ, ಕಾರ್ತಿಕ್, ಮುನಿಶಾಂತ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.

ಪರಿಹಾರಕ್ಕೆ ಒತ್ತಾಯ: ಸುಮಾರು 1 ಎಕರೆಯಲ್ಲಿನ ಕಬ್ಬಿನ ಫಸಲು ಬೆಂಕಿಗೆ ಆಹುತಿಯಾಗಿದ್ದು, 2 ಲಕ್ಷ ರೂ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ರೈತ ಕೇಶವಮೂರ್ತಿ ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!