ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ.
ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು, ಕಟಾವಿನ ಹಂತಕ್ಕೆ ಬಂದಿತ್ತು. ಆದರೆ ಮಧ್ಯಾಹ್ನ 12ರ ವೇಳೆಯಲ್ಲಿ ಜಮೀನಿನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಯ ಸಾರ್ಟ್ ಸರ್ಕ್ಯೂಟ್ ನ ಬೆಂಕಿಯು ತೆಂಗಿನ ಮರದ ಗರಿಗೆ ತಗುಲಿ ಜಮೀನಿಗೆ ಬಿದ್ದಿದೆ. ಪರಿಣಾಮ ಕಬ್ಬಿನ ಫಸಲನ್ನು ಆವರಿಸಿದೆ. ಈ ಬಗ್ಗೆ ಕೇಶವಮೂರ್ತಿ ಕೂಡಲೇ ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಲಾಗಿ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಪ್ರಶಾಂತ್‍ನಾಯಕ್, ಸಿಬ್ಬಂದಿಗಳಾದ ಕೆ.ರವಿ, ಕಾರ್ತಿಕ್, ಮುನಿಶಾಂತ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.
ಪರಿಹಾರಕ್ಕೆ ಒತ್ತಾಯ: ಸುಮಾರು 1 ಎಕರೆಯಲ್ಲಿನ ಕಬ್ಬಿನ ಫಸಲು ಬೆಂಕಿಗೆ ಆಹುತಿಯಾಗಿದ್ದು, 2 ಲಕ್ಷ ರೂ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ರೈತ ಕೇಶವಮೂರ್ತಿ ಒತ್ತಾಯಿಸಿದ್ದಾರೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…