ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ನಿರ್ದೇಶನ ನೀಡಿದರು.
ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದರು.
‘ಎಲ್ಲೆಲ್ಲಿಗೆ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳು ಅಗತ್ಯವಿದೆ, ಎಲ್ಲೆಲ್ಲಿ ಕಟ್ಟಡ ನಿರ್ಮಿಸಬೇಕು ಮತ್ತು ಹೆಚ್ಚುವರಿ ಕೊಠಡಿಗಳೆಷ್ಟು ಬೇಕಾಗಿದೆ ಎಂಬ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಬೇಕು.
ಅದರ ಪ್ರತಿಯನ್ನು ನನಗೂ ಕೊಡಬೇಕು. ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ನಾನು ಆದ್ಯತೆ ಮೇಲೆ ಮಂಜೂರು ಮಾಡಿಸಿಕೊಡುತ್ತೇನೆ. ಪ್ರಸ್ತಾವ ಕಳುಹಿಸಿ ಸುಮ್ಮನೆ ಕುಳಿತುಕೊಂಡರೆ ಪ್ರಯೋಜನ ಆಗುವುದಿಲ್ಲ. ನನ್ನ ಮೂಲಕ ಫಾಲೋಅಪ್ ಮಾಡಿಸಬೇಕು. ಕೂಡಲೇ ಪಟ್ಟಿ ಕೊಡಬೇಕು’ ಎಂದು ನಿರ್ದೇಶನ ನೀಡಿದರು.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…