Mysore
22
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಪಿಂಚಣಿ ಅದಾಲತ್‌ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಗ್ರೇಡ್ 2 ತಹಸಿಲ್ದಾರ್ ಧನಂಜಯ್

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು.

ತಾಲೂಕಿನ ನಾಗನತ್ತ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಶೇಷ ಚೇತನರ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ಬರುವ ಪಿಂಚಣಿ ಅನುಕೂಲಗಳನ್ನು ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಗ್ರಾಮದಲ್ಲೇ ಬಂದು ಅರ್ಜಿ ಮತ್ತು ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಎಂದರು.

ಸೇತುವೆ ನಿರ್ಮಾಣಕ್ಕೆ ಒತ್ತಾಯ: ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಮಣಗಳ್ಳಿಯಿಂದ ನಾಗನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ದೊಡ್ಡಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ ಪ್ರಸಂಗ ಜರುಗಿತು.
ದಿನಂಪ್ರತಿ ಈ ರಸ್ತೆಯಲ್ಲಿ ಓಡಾಡುವ ಜನತೆ ಬಿದ್ದು ಈಗಾಗಲೇ ಕೆಲವರು ಗಾಯಗೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳು ಸಹ ಇದೆ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೇತುವೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಹಳ್ಳದಲ್ಲಿ ಸದಾ ನೀರು ಹರಿಯುತ್ತಿರುವುದರಿಂದ ಪಾಚಿ ಕಟ್ಟಿ ಜಾರಿ ಬೀಳುವ ದುಸ್ಥಿತಿ ಇದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆ ವಿವಿಧ ಪಿಂಚಣಿ ಸೌಲಭ್ಯಗಳಿಗೆ ಅರ್ಜಿ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಆರ್. ಐ. ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ವಾಸುದೇವ್, ಸಿಬ್ಬಂದಿಗಳು ಸೇರಿದಂತೆ ಮುಖಂಡರುಗಳಾದ ಮಾದೇವ(ಕೆಂ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!