ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ
ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.
ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.
ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್‌ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.
ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…