ಜಿಲ್ಲೆಗಳು

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ

ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಕಿವಿಮಾತು ಹೇಳಿದರು.

ಮಂಡ್ಯದಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವುದು ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಭಾನುವಾರ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಉತ್ತೇಜನ ತುಂಬಿದರು.

ಪದವಿ ಹಂತದಲ್ಲಿ ಇರುವಾಗಲೇ ಬಹುತೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರು ಬಹುತೇಕರು ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಕನಸು, ಗುರಿ ಇಟ್ಟುಕೊಂಡಿರುತ್ತೀರಿ. ಇದೇ ಉತ್ಸಾಹದಲ್ಲಿ ತಯಾರಿಯನ್ನೂ ಮಾಡಿ ಐಎಎಸ್ ಅಲ್ಲದೇ ಇದ್ದೂ ಒಂದಿಲ್ಲೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತೀರಿ. ಎಲ್ಲರೂ ಐಎಎಸ್ ಅಧಿಕಾರಿಗಳು ಆಗಲು ಆಗುವುದಿಲ್ಲ. ಹಾಗೆಂದು ಸಿಕ್ಕ ಉದ್ಯೋಗದಲ್ಲಿ ಪ್ರಾಮಾಣಿಕವಾಗಿ ಜನಮುಖಿಯಾಗಿ ಕೆಲಸ ಮಾಡುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ತಯಾರಿ ಮಾಡುವಾಗಲೇ ಗುರಿ ಸ್ಪಷ್ಟವಾಗಿರಲಿ. ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಿಗುವುದಿಲ್ಲ ಎಂಬುದೂ ತಿಳಿದಿರಲಿ. ಹಾಗೆಂದು ನಿರಾಶರಾಗುವುದು ಬೇಡ. ಒಂದರಲ್ಲಿ ಹಿನ್ನಡೆಯಾದರೂ ಇನ್ನೂ ಒಂಬತ್ತು ಮಾರ್ಗಗಳನ್ನು ನೀವು ಯೋಜಿಸಿಕೊಂಡಿರಬೇಕು. ಈ ಆತ್ಮ ವಿಶ್ವಾಸವೇ ನಿಮ್ಮನ್ನು ಬದುಕಿನಲ್ಲಿ ಮುಂದೆ ತೆಗೆದುಕೊಂಡು ಹೋಗುತ್ತದೆ ಎಂದು ನುಡಿದರು. ೬೦ರ ದಶಕದಲ್ಲಿ ಅಂದರೆ ೬೨ ವರ್ಷದ ಹಿಂದೆ ನಾನೂ ನಿಮ್ಮ ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುತ್ತಿದ್ದೆ. ಐಎಫ್‌ಎಸ್ ಅಧಿಕಾರಿಯಾಗಿ ಉತ್ತೀರ್ಣನಾಗಿ ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತು. ಏನೇ ಮಾಡಿದಾಗ ನಾನೂ ಕೊಡುವೆ. ನಿನ್ನ ಭಾಗವೂ ಇರಲಿ ಎಂದು ಹೇಳಿದಾಗ ಸೋರಿಕೆ ತಪ್ಪುತ್ತದೆ. ಇದರಲ್ಲಿ ನನ್ನ ಬೆವರೂ ಇದೆ ಎಂದಾಗ ಪ್ರಾಮಾಣಿಕತೆಯೂ ಬೆಳೆಯುತ್ತದೆ. ಇದನ್ನು ಪ್ರತಿಯೊಬ್ಬರೂ ಉದ್ಯೋಗ ಮಾಡುವಾಗ ರೂಢಿಸಿಕೊಳ್ಳಬೇಕು ಎಂದು ಸೂಚಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಮಂಗಲ ತಿಮ್ಮೇಗೌಡ, ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಎಂ.ಅಣ್ಣಯ್ಯ, ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆನರಾ ಬ್ಯಾಂಕ್ ನಿವೃತ್ತ ಡಿಜಿಎಂ ಎಸ್.ಟಿ.ರಾಮಚಂದ್ರ, ಮೈಸೂರು ಮಹಾರಾಣಿ ಕಾಲೇಜು ಪ್ರಾಧ್ಯಾಪಕ ಡಾ.ಹೇಮಚಂದ್ರ ಮತ್ತಿತರರು ಹಾಜರಿದ್ದರು. ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿವಿಧ ಕಾಲೇಜುಗಳ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ತಜ್ಞರ ಉಪನ್ಯಾಸಗಳನ್ನು ಆಲಿಸಿ ಸಂವಾದದಲ್ಲೂ ಭಾಗಿಯಾದರು.

andolanait

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago